ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಂತ್ರಸ್ತ ಬಾಲಕಿಯರು, ಪೋಷಕರ ಹೇಳಿಕೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಸಂತ್ರಸ್ತ ಬಾಲಕಿಯರು, ಪೋಷಕರ ಹೇಳಿಕೆ ಪಡೆಯುತ್ತಿದ್ದು, ಸೆಕ್ಷನ್ 161ರ ಅಡಿ ಪೊಲೀಸರು ಹೇಳಿಕೆ ದಾಖಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಬಾಲಕಿಯ ಆರೋಗ್ಯ ಸಮಸ್ಯೆ, ಭದ್ರತಾ ದೃಷ್ಟಿಯಿಂದ ವಿಚಾರಣೆ ನಡೆಯುತ್ತಿದ್ದು, 2-3 ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆಯಿದೆ ಎಂದು ಸ್ಟ್ಯಾನ್ಲಿ ಹೇಳಿದರು.. ಪ್ರಕರಣದ ಸಂಬಂಧ ಮಕ್ಕಳ ಹೇಳಿಕೆಯನ್ನು ದಾಖಲಿಸಿ ಮುಂದಿನ ಕ್ರಮ ಜರುಗಿಸಬೇಕು ಸ್ಟ್ಯಾನ್ಲಿ ಈ ಹಿಂದೆ ಆಗ್ರಹಿಸಿದ್ದರು.
ಇನ್ನೂ, ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ ನಂತರ ದಾವಣಗೆರೆಯ ವಿರಕ್ತ ಮಠದ ಶ್ರೀ ಬಸವಪ್ರಭು ಅವರನ್ನು ಮುರುಘಾ ಮಠದ ಉಸ್ತುವಾರಿ ಪೀಠಾಧಿಪತಿಯಾಗಿ ನೇಮಿಸಲಾಗಿದೆ.
ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಘಾಮಠದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಮಠದ ಅಧೀನದಲ್ಲಿರುವ ಅಕ್ಕ ಮಹಾದೇವಿ ವಿದ್ಯಾರ್ಥಿ ನಿಲಯದಲ್ಲಿ ವಾಸವಾಗಿದ್ದ ತಮ್ಮ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಹಾಗೂ ಇನ್ನಿತರ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಮುರುಘಾ ಮಠದ ಸ್ವಾಮೀಜಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.