ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿತ್ತು.
ಇಂದು ಮುರುಘ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು ನಿನ್ನೆ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಕೋರ್ಟ್ ಸೂಚನೆಯಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು,. ವೈದ್ಯರ ತಂಡದವರು ಅವರ ದೈಹಿಕ ಕ್ಷಮತೆ ಬಗ್ಗೆ ಪರಿಶೀಲಿಸಿತ್ತು ಎಂದಿದ್ದಾರೆ.
ಇಂದು ಬೆಳಗ್ಗೆ 10:45 ಕ್ಕೆ ಆ್ಯಂಜಿಯೋಗ್ರಾಮ್ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ. ಸದದ್ಯ 24 ಗಂಟೆಗಳ ಕಾಲ ತೀವ್ರ ನಿಗಾದಲ್ಲಿ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಅನುಮತಿ ನೀಡಿತ್ತು.
BREAKING NEWS : IND vs AUS ಪಂದ್ಯದ ಟಿಕೆಟ್’ಗಾಗಿ ನೂಕು ನುಗ್ಗಲು ; ಕಾಲ್ತುಳಿತದಲ್ಲಿ 7 ಜನರಿಗೆ ಗಾಯ
BIG BREAKING NEWS: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ರಾಹುಲ್ ಗಾಂಧಿ