ಚಿತ್ರದುರ್ಗ : ಮುರುಘಾಶ್ರೀ ಕೇಸ್ ನ ಸಂತ್ರಸ್ತ ನಾಲ್ವರು ಮಕ್ಕಳಿಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಲಿ ಎಂದು ಮೈಸೂರು ಒಡನಾಡಿ ಸಂಸ್ಥೆಯ ಪರಶುರಾಮ್ ಆಗ್ರಹಿಸಿದರು.
ಇಂದು ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆ ಬಳಿಕ ಮಾತನಾಡಿದವರು ಸಂತ್ರಸ್ತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಮಕ್ಕಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಹೇಳಿದರು, ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆ ನಡೆಯಲಿ. ನನಗೆ ಸಿಡಬ್ಲೂಸಿ ಮೇಲೆ ನಂಬಿಕೆ ಇಲ್ಲ, ಚಿತ್ರದುರ್ಗ ಸಿಡಬ್ಲೂಸಿ ಮೇಲಂತೂ ನಂಬಿಕೆಯೇ ಇಲ್ಲ. ನ್ಯಾಯಾಂಗದ ಸುಪರ್ದಿಯಲ್ಲಿ ಸಿಬಿಐ ತನಿಖೆ ಆಗಬೇಕು , 13 ರಿಂದ 17 ಜನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆಂಬ ಮಾಹಿತಿಯಿದೆ ಎಂದು ಹೇಳಿದರು.
ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಮೈಸೂರು ಒಡನಾಡಿ ಸಂಸ್ಥೆಯ ನಾಲ್ವರನ್ನು ವಿಚಾರಣೆಗೊಳಪಡಿಸಿದ್ದಾರೆ. ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಮೈಸೂರು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ , ಸಿಬ್ಬಂದಿ ಪರಶುರಾಮ್ ಸೇರಿ ನಾಲ್ವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಡಿವೈಎಸ್ ಪಿ ಅನಿಲ್ ನೇತೃತ್ವದ ತಂಡ ಮೈಸೂರು ಒಡನಾಡಿ ಸಂಸ್ಥೆಯ ನಾಲ್ವರನ್ನು ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.
ಜಾಮೀನು ಅರ್ಜಿ ಮುಂದೂಡಿಕೆ
ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ವಿಚಾರಣೆಯನ್ನು ನವೆಂಬರ್ 2 ಕ್ಕೆ ಮುಂದೂಡಲಾಗಿದೆ.ಪ್ರಕರಣದ ಎ 6 ಆರೋಪಿ ಮುರುಘಾಶ್ರೀ ಸಹಾಯಕ ಮಹಾಲಿಂಗ ಹಾಗೂ ಎ 7 ಆರೋಪಿ ಅಡುಗೆ ಭಟ್ಟ ಕರಿಬಸಪ್ಪ ಸಲ್ಲಿಸಿದ್ದ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ನವೆಂಬರ್ 2 ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಇನ್ನೂ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕೇಸ್ ( POSCO Case ) ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ 4ನೇ ಆರೋಪಿಯಾಗಿದ್ದಂತ ಮುರುಘಾ ಮಠದ ( Murugha Matt ) ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ( Karnataka Police ) ಬಂಧಿಸಿದ್ದಾರೆ.
ಮುರುಘಾ ಶ್ರೀಗಳ ( Murugha Sri ) ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ ಮುರುಘಾ ಶ್ರೀ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ.
ಸಾರ್ವಜನಿಕರೇ ಗಮನಿಸಿ : ನಾಳೆ ಕೆ.ಆರ್.ವೃತ್ತದಿಂದ ತಿಮ್ಮಯ್ಯ ಜಂಕ್ಷನ್ ವರೆಗೆ ವಾಹನ ಸಂಚಾರ ನಿಷೇಧ