ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮುರುಘ ಶ್ರೀ ಗಳು ಪೀಠ ತ್ಯಾಗ ಮಾಡದ ಹಿನ್ನೆಲೆ ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಲಿದೆ. ಮಾಜಿ ಸಚಿವ H. ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದ್ದು, ಮಠದ ಸಂಪ್ರದಾಯ ನಿರ್ವಹಣೆ ಕುರಿತು, ಮುಂದಿನ ನಡೆ ಬಗ್ಗೆ ಚರ್ಚಿಸಲು ಮುಖಂಡರು ಸಭೆ ಕರೆದಿದ್ದಾರೆ. ಶ್ರೀಗಳ ಪೀಠ ತ್ಯಾಗಕ್ಕೆ ಆಗ್ರಹಿಸಿ ಹೋರಾಟದ ಬಗ್ಗೆ ಚರ್ಚೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದರ ನಡುವೆ ಚೆಕ್ ಹಾಗೂ ಇತರ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ.
ನಿನ್ನೆ ಮುರುಘಾ ಶರಣರ ಪರ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು.ಮಠದ ಸಿಬ್ಬಂದಿ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ವೇತನ ಪಾವತಿ ಹಾಗೂ ಇತರ ಖರ್ಚುಗಳಿಗಾಗಿ ಪ್ರತಿತಿಂಗಳು 200ಕ್ಕೂ ಚೆಕ್ಗಳಿಗೆ ಮುರುಘಾ ಶರಣರು ಸಹಿ ಹಾಕಬೇಕಿದೆ. ಇಲ್ಲದಿದ್ದರೆ ವೇತನ ಪಾವತಿ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ವಾದ ಆಲಿಸಿದ ಹೈಕೋರ್ಟ್ ‘ನಿಮ್ಮ ಸಮಸ್ಯೆಯಿಂದ ಯಾವುದೇ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು. ಬಂಧನಕ್ಕೆ ಮೊದಲು ಹೇಗೆ ಸಂಬಳ ನೀಡಲಾಗುತ್ತಿತ್ತು ಎನ್ನುವ ಬಗ್ಗೆ ವಿವರವಾದ ಮಾಹಿತಿ ಇರುವ ಮೆಮೊ ಸಲ್ಲಿಸಿ’ ಎಂದು ಮುರುಘಾ ಶರಣರ ಪರ ವಕೀಲರಿಗೆ ಸೂಚನೆ ನೀಡಿದೆ.
‘ಸಿಬಿಐ’ ದಾಳಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ..? |D.K Shivakumar
BIGG NEWS : ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರಿಗೆ ಕೊಲೆ ಬೆದರಿಕೆ |T.D Rajegowda