ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮತ್ತು 7ನೇ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಅ.28 ಕ್ಕೆ ಮುಂದೂಡಿದೆ.
ಮುರುಘಾ ಶರಣದ ಸಹಾಯಕ ಮಹಾಲಿಂಗ ಈ ಪ್ರಕರಣದ 6ನೇ ಆರೋಪಿಯಾಗಿದ್ದರೆ, ಬಾಣಸಿಗ ಕರಿಬಸಪ್ಪ 7ನೇ ಆರೋಪಿಯಾಗಿದ್ದಾರೆ. ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಅ 28ಕ್ಕೆ ಮುಂದೂಡಿದೆ.
ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ನ್ಯಾಯಾಧೀಶರ ಎದುರು ಬಾಲಕಿಯರು ಸಿಆರ್ಪಿಸಿ ಅನ್ವಯ ಹೇಳಿಕೆ ದಾಖಲಿಸಿದರು. ಬಾಲಕಿಯರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು.
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಮಠದ ಶ್ರೀಗಳ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯರು ಇಂದು ಮೈಸೂರಿನಿಂದ ಚಿತ್ರದುರ್ಗಕ್ಕೆ ಬಂದಿದ್ದು, ಚಿತ್ರದುರ್ಗ ಜಿಲ್ಲಾ ಕೋರ್ಟ್ ಜಡ್ಜ್ ಎದುರು ಸಿಆರ್ ಪಿಸಿ 164 ರಡಿ ಹೇಳಿಕೆ ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗಳ ವಿರುದ್ಧ ಚಿತ್ರದುರ್ಗ ಪೊಲೀಸರು 2 ನೇ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
BIGG NEWS : ನವೆಂಬರ್ 2 ನೇ ವಾರದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ `ರಥಯಾತ್ರೆ’ ಆರಂಭ!
BREAKING NEWS : ಅರುಣಾಚಲ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಢ : 700 ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗಾಹುತಿ
BIGG NEWS: ರಾಯಚೂರಿನಲ್ಲಿ ದೇವಾಲಯಕ್ಕಿಲ್ಲ ಗ್ರಹಣ ಎಫೆಕ್ಟ್; ರಾಯರ ಮಠದಲ್ಲಿ ಶಾಂತಿ ಹೋಮ
/