ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ.
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಬಸವರಾಜ್ ನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ. ಇನ್ನೂ, ಬಸವರಾಜನ್ ಪತ್ನಿ ಸೌಭಾಗ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾ ಆಗಿದೆ.
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ನಾಳೆ ಕೋರ್ಟ್ ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ಸಂಬಂಧ ತೀರ್ಪು ಪ್ರಕಟಿಸಲಿದೆ.
‘ನಾನು ರೌಡಿ ಶೀಟರ್ ಆಗಿ ಜೈಲಿಗೆ ಹೋಗಿಲ್ಲ’ : ಬಿಜೆಪಿಗೆ ಡಿಕೆಶಿ ತಿರುಗೇಟು