ಚಿತ್ರದುರ್ಗ : ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘರಾಜೇಂದ್ರ ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುರುಘಾ ಶ್ರೀ ವಿರುದ್ಧ ಮತ್ತಿಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಮುರುಘಮಠದ ಶರಣರ ವಿರುದ್ಧ ಮತ್ತಿಬ್ಬರು 12 ಹಾಗೂ 14 ವರ್ಷದ ಬಾಲಕಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದಾರೆ. ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಅದರಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಯಿತು.
ಇನ್ನೂ, ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳಿಗೆ ಬ್ರಹನ್ಮಠದ ವಿದ್ಯಾಪೀಠಕ್ಕೆ ಸೇರಿದ ಸಂಸ್ಥೆಗಳಿಗೆ ಸಂಬಂಧಿಸಿದ ಪವರ್ ಆಫ್ ಅಟಾರ್ನಿಯನ್ನು ಜೈಲಿನಿಂದಲೇ ಕಾರ್ಯಗತಗೊಳಿಸಲು ಹೈಕೋರ್ಟ್ ಇತ್ತೀಚೆಗೆ ಅನುಮತಿ ನೀಡಿದೆ.
ಮುರುಘಾಶ್ರೀಗಳು ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಅನುಮತಿ ನೀಡುವ ಸಂಬಂಧ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಅರ್ಜಿದಾರರು ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಅನುಮತಿ ಕೋರಿ ಜೈಲಿನ ಅಧಿಕ್ಷಕರಿಗೆ ಮನವಿ ಸಲ್ಲಿಸಬೇಕು. ಅಧೀಕ್ಷಕರು ಆ ಮನವಿ ಪರಿಗಣಿಸಬೇಕು. ಪವರ್ ಆಫ್ ಅಟಾರ್ನಿ ಕಾರ್ಯಗತ ಮಾಡಿದ ನಂತರ ದಾಖಲೆಗಳನ್ನು ತನಿಖಾಧಿಕಾರಿಗಳು ಪಡೆದು, ಅರ್ಜಿದಾರರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
OMG!: ಮಹಿಳೆಯೊಬ್ಬರ ಕಣ್ಣಲ್ಲಿದ್ದ 23 ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಹೊರತೆಗೆದ ವೈದ್ಯರು… Watch Video
SHOCKING NEWS: ಮಗಳು ಬೆಡ್ಶೀಟ್ ತಂದುಕೊಡದಕ್ಕೆ ನೆತ್ತಿಗೇರಿದ ಕೋಪ: ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿರಾಯ