ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ.
ಆರೋಪಿಗಳಾದ ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 12 ರವರೆಗೆ ವಿಸ್ತರಣೆ ಮಾಡಲಾಗಿದೆ.
ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಹಾಗೂ ಬಸವರಾಜೇಂದ್ರ ಜಾಮೀನು ಅರ್ಜಿಯನ್ನು ಡಿಸೆಂಬರ್ 12 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ಇಬ್ಬರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ಡಿಸೆಂಬರ್ 12 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಪ್ಪಳದಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ