ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿಯಾಗಿರುವ ವಾರ್ಡನ್ ರಶ್ಮಿಯನ್ನು ನ.10 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಪೊಲೀಸರು ಪ್ರಕರಣದ ಎ2 ಆರೋಪಿ ರಶ್ಮಿ ಬಾಡಿ ವಾರೆಂಟ್ ಕೇಳಿದ್ದು, ನ.10 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಆದೇಶಿಸಿದೆ.
ಪೋಕ್ಸೋ ಕಾಯ್ದೆಯಡಿ ಮುರುಘಾ ಶರಣರ ಬಂಧನದ ಬೆನ್ನಲ್ಲೇ ಚಿತ್ರದುರ್ಗ ಪೊಲೀಸರಿಂದ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿ ಅವರನ್ನು ಬಂಧಿಸಲಾಗಿತ್ತು. ವಾರ್ಡನ್ ರಶ್ಮಿ ಅವರನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದ್ದು, ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.ಮುರುಘಾ ಶರಣರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಲ್ಲಿ ವಾರ್ಡನ್ ರಶ್ಮಿ ಪ್ರಮುಖ ಆರೋಪಿಯಾಗಿದ್ದಾರೆ.
ಸೋಷಿಯಲ್ ಮೀಡಿಯಾ ರೀಲ್ ಮಾಡಲು ಹೆಚ್ಚು ಸಮಯ ವ್ಯಯಿಸಿದ್ದಕ್ಕಾಗಿ ಪತ್ನಿಯನ್ನು ಕೊಂದ ಪತಿ
ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ – ಸಿಎಂ ಬೊಮ್ಮಾಯಿ