ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ( POSCO Case ) ಬಂಧನಕ್ಕೆ ಒಳಗಾಗಿ ಜೈಲು ಸೇರಿಸುವಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ( Dr Shivamurthy Shivasharana ) ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಅವರಿಗೆ ಇಂದು ಜಾಮೀನು ದೊರೆಯದೇ ಜೈಲೇ ಗತಿ ಎನ್ನುವಂತೆ ಆಗಿದೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ನಮ್ಮ ಕ್ಲಿನಿಕ್’ ವಿಸ್ತರಣೆ | Namma Clinic
ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಮುರುಘಾ ಶ್ರೀಗಳ ( Murugha Sri ) ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧನದಲ್ಲಿರುವಂತ ಸ್ವಾಮೀಜಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗಾಗಿ ಅವರ ಪರ ವಕೀಲರು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
BIG NEWS: ‘KSRTC ಆಸ್ಪತ್ರೆ’ ಖಾಸಗಿಯವರಿಗೆ ವಹಿಸುವಂತೆ ‘ಬಿಜೆಪಿ ಸಂಸದ ತೇಜಸ್ವಿ ಸೂರ್ಯ’ರಿಂದ ಒತ್ತಡ, ಗಂಭೀರ ಆರೋಪ
ಇಂದು ಕೂಡ ಮುರುಘಾ ಶ್ರೀಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠವು, ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಶಿವಮೊಗ್ಗ: ಸೆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಇನ್ನೂ ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವಂತ 4ನೇ ಆರೋಪಿ ಪರಮಶಿವಯ್ಯ ಹಾಗೂ 5ನೇ ಆರೋಪಿ ಗಂಗಾಧರ್ ಅವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 21ಕ್ಕೆ ಚಿತ್ರದುರ್ಗದ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದೂಡಿಕೆ ಮಾಡಿದೆ.