ಚಿತ್ರದುರ್ಗ : ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
.ಇದೀಗ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜೈಲಿನಲ್ಲಿರುವ ಮುರುಘಾ ಮಠದ ಮುರುಘ ಶ್ರೀಗಳಿಗೆ ಹೃದಯ ಸಮಸ್ಯೆ ಎದುರಾಗಿದೆ.
ಹೌದು, ಪೋಕ್ಸೋ ಕೇಸ್ ನಡಿ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮುರುಘಾ ಶ್ರೀಗಳ ಪರ ವಕೀಲರ ಮನವಿ ಮೇರೆಗೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೋರ್ಟ್ ಸೂಚನೆ ನಿಡಿದೆ.
ಕೊರೋನರಿ ಆಂಜಿಯೋಗ್ರಾಂಗೆ ಶ್ರೀಗಳ ಪರ ವಕೀಲರು ಮನವಿ ಮಾಡಿದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಪೊಲೀಸ್ ವ್ಯಾನ್ ನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶ್ರೀಗಳನ್ನು ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿದೆ. .
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ್ದು, ಜಾಮೀನಿಗಾಗಿ ಮಠದ ಪರ ವಕೀಲರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಭಾರತ್ ಜೋಡೋ ಯಾತ್ರಾ POSTERನಲ್ಲಿ ವೀರ್ ಸಾವರ್ಕರ್ ಫೋಟೋ ವೈರಲ್ | Bharat Jodo Yatra banner
ನ.11 ರಿಂದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ಆಹ್ವಾನ