ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿತ್ತು. ಬಳಿಕ ಮುರುಘ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿ ನಡೆಸಲಾಗಿತ್ತು.
ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾ ಶ್ರೀಗಳನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುರುಘಾ ಶ್ರೀ ದಾಖಲಾಗಿದ್ದರು. ನಿನ್ನೆ ಬೆಳಗ್ಗೆ 10:45 ಕ್ಕೆ ಆ್ಯಂಜಿಯೋಗ್ರಾಮ್ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿತ್ತು, ಇಂದು ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾ ಶ್ರೀಗಳನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಇಂದು ಮುರುಘ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಕೂಡ ನಡೆಯಲಿದ್ದು, ಶ್ರೀಗಳಿಗೆ ಜೈಲೋ..ಬೇಲೋ ಎಂಬುದು ಗೊತ್ತಾಗಲಿದೆ.
ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಅನುಮತಿ ನೀಡಿತ್ತು.
‘ಐಟಿಐ’ ಪಾಸಾದವರಿಗೆ ಸಚಿವ ‘ಸುನೀಲ್ ಕುಮಾರ್’ ಗುಡ್ ನ್ಯೂಸ್ : ಕೆಪಿಟಿಸಿಎಲ್, ಎಸ್ಕಾಂ ನಲ್ಲಿ ಉದ್ಯೋಗವಕಾಶ