ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ್ದು, ಜಾಮೀನಿಗಾಗಿ ಮಠದ ಪರ ವಕೀಲರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ ಅತಿವೃಷ್ಟಿಗೆ ‘ಸಿಎಂ ಬೊಮ್ಮಾಯಿ’ ಕೊಟ್ಟ ಕಾರಣ ಏನು ಗೊತ್ತಾ..?
BIGG NEWS: ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಪರಿಷತ್ನಲ್ಲಿ ಅಂಗೀಕಾರ