ಮೈಸೂರು: ಬೆಂಗಳೂರಲ್ಲಿ ಶ್ರೀರಾಮನವಮಿ ಮುಗಿಸಿ ಕಾರಿನಲ್ಲಿ ಹೋಗುತ್ತಿದ್ದಂತ ಯುವಕರನ್ನು ಅಡ್ಡಗಟ್ಟಿದ್ದಂತ ಮುಸ್ಲೀಂ ಯುವಕರು, ಜೈ ಶ್ರೀರಾಂ ಅಲ್ಲ, ಅಲ್ಲಾ ಹು ಅಕ್ಬರ್ ಎಂಬುದಾಗಿ ಕೂಗುವಂತೆ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೊಬ್ಬನನ್ನು ಮುಸ್ಲೀಂ ಯುವಕರು ಹಲ್ಲೆ ನಡೆಸಿರುವಂತ ಘಟನೆ ಮೈಸೂರಲ್ಲಿ ನಡೆದಿದೆ.
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಪ್ರಧಾನಿ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲೀಂ ಯುವಕರು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ.
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿಯಲ್ಲಿ ರೋಹಿತ್ ಎಂಬಾತನ ಮೇಲೆ ಮುಸ್ಲೀಂ ಯುವಕರು ನರೇಂದ್ರ ಮೋದಿ ಹಾಡು ಮಾಡಿದ್ದೀಯ. ನಿನ್ನ ಸಾಯಿಸುತ್ತೇನೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸಲ್ಲಿಸಿರೋ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನೂ ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ಯುವಕ ನೇರವಾಗಿ ಮೈಸೂರು ಲಕ್ಷ್ಮೀ ಪುರಂ ಠಾಣೆಗೆ ತೆರಳಿ ದೂರು ನೀಡಿದ್ದು, ಆ ಬಳಿಕ ಪೊಲೀಸರೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್