ನವದೆಹಲಿ: ದೆಹಲಿಯಲ್ಲಿ ಭಾನುವಾರ 20 ವರ್ಷದ ಯುವತಿಯೊಬ್ಬಳ ಸ್ಕೂಟಿ ಕಾರಿಗೆ ಡಿಕ್ಕಿ ಹೊಡೆದು, ಆಕೆಯ ಬಟ್ಟೆ ಕಾರಿಗೆ ಸಿಲುಕಿದ ಪರಿಣಾಮ ಸುಮಾರು 12 ಕಿಮೀ ವರೆಗೆ ಎಳದೊಯ್ದಿದ್ದು, ಆಕೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ(Lieutenant Governor VK Saxena) ಅವರು, ʻಈ ದುರಂತದಿಂದ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆʼ ಎಂದಿದ್ದಾರೆ.
ʻಭಾನುವಾರ ಬೆಳಿಗ್ಗೆ ಕಂಝಾವ್ಲಾ-ಸುಲ್ತಾನ್ಪುರಿಯಲ್ಲಿ ನಡೆದ ಅಮಾನವೀಯ ಘಟನೆಯಿಂದ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಈ ಘಟನೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ದೆಹಲಿಯ ಪೊಲೀಸ್ ಆಯುಕ್ತರು ಹೆಚ್ಚನ ನಿಗಾ ವಹಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಎಲ್ಲಾ ಅಂಶಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆʼ ಎಂದು ಗವರ್ನರ್ ಟ್ವೀಟ್ ಮಾಡಿದ್ದಾರೆ.
My head hangs in shame over the inhuman crime in Kanjhawla-Sultanpuri today morning and I am shocked at the monstrous insensitivity of the perpetrators.
Have been monitoring with @CPDelhi and the accused have been apprehended. All aspects are being thoroughly looked into.— LG Delhi (@LtGovDelhi) January 1, 2023
“ಸಂತ್ರಸ್ತೆಯ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಬೆಂಬಲ/ಸಹಾಯ ಮಾಡಲಾಗುವುದು. ಹೆಚ್ಚು ಜವಾಬ್ದಾರಿಯುತ ಮತ್ತು ಸಂವೇದನಾಶೀಲ ಸಮಾಜಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ” ಎಂದು ಅವರು ಹೇಳಿದರು.
BREAKING NEWS : `ನೋಟು ಅಮಾನ್ಯೀಕರಣ’ ಸಿಂಧುತ್ವ ತೀರ್ಪು ಎತ್ತಿ ಹಿಡಿದ ಸುಪ್ರೀಂಕೋರ್ಟ್
BIGG NEWS: ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ನಿಧನ
BREAKING NEWS : `ನೋಟು ಅಮಾನ್ಯೀಕರಣ’ ಸಿಂಧುತ್ವ ತೀರ್ಪು ಎತ್ತಿ ಹಿಡಿದ ಸುಪ್ರೀಂಕೋರ್ಟ್
BIGG NEWS: ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ನಿಧನ