ಬೆಂಗಳೂರು : ಕಳೆದ 17 ವರ್ಷಗಳಿಂದ ಐಪಿಲ್ ಟ್ರೊಫಿ ಬರ ಎದುರಿಸುತ್ತಿದ್ದ RCB ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ RCB ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ RCB ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೆ ಇದೆ. ನಿನ್ನೆ ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಅಂತಿಮವಾಗಿ ಐಪಿಎಲ್ಗೆ ಹೊಸ ಚಾಂಪಿಯನ್ ಸಿಕ್ಕಿತು. ಪಂಜಾಬ್ ಕಿಂಗ್ಸ್ ಕೂಡ ಉತ್ತಮವಾಗಿ ಆಡಿದರೂ ಆರ್ಸಿಬಿ ಸಾಂಘೀಕ ದಾಳಿಯ ಮುಂದೆ ಮಂಡಿಯೂರಿತು. 17 ವರ್ಷಗಳ ಟ್ರೋಫಿ ಬರವನ್ನು ನೀಗಿಸಿಕೊಂಡ ಬಳಿಕ ಭಾವುಕರಾದ ವಿರಾಟ್ ಕೊಹ್ಲಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದರು.ಬನ್ನಿ ಕೊಹ್ಲಿ ಏನು ಹೇಳಿದ್ದಾರೆ ಅನ್ನೋದನ್ನ ತಿಳಿಯೋಣ.
ವಿರಾಟ್ ಕೊಹ್ಲಿ ಹೇಳಿದ್ದೇನು?
ಕರ್ನಾಟಕದ ದತ್ತು ಪುತ್ರ ವಿರಾಟ್ ಕೊಹ್ಲಿ ಐಪಿಎಲ್ ಆರಂಭವಾದಾಗಿನಿಂದಲೂ ಅಂದರೆ ಕಳೆದ 18 ವರ್ಷಗಳಿಂದ ಆರ್ಸಿಬಿಯ ಭಾಗವಾಗಿದ್ದಾರೆ. ಆದರೆ ಇಲ್ಲಿಯವರೆಗೆ ಅವರು ಈ ತಂಡಕ್ಕಾಗಿ ಒಂದೇ ಒಂದು ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದಾಗ್ಯೂ, 2025 ರ ಐಪಿಎಲ್ನಲ್ಲಿ ಕಿಂಗ್ ಕೊಹ್ಲಿಯ ಕಾಯುವಿಕೆಗೆ ತೆರೆ ಬಿದ್ದಿದೆ. ಈ ಗೆಲುವಿನ ನಂತರ ಭಾವುಕರಾಗಿ ಮಾತನಾಡಿದ ವಿರಾಟ್, ‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ, ನನ್ನ ಅತ್ಯುತ್ತಮವನ್ನು ನೀಡಿದೆ.
ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ಎಬಿ ಡಿವಿಲಿಯರ್ಸ್ ಫ್ರಾಂಚೈಸಿಗಾಗಿ ಮಾಡಿದ್ದು ಅದ್ಭುತವಾಗಿದೆ. ಹೀಗಾಗಿ ನಾನು ಅವರಿಗೆ ಈ ಕಪ್ ನಮ್ಮದ್ದು ಮಾತ್ರವಲ್ಲ ಬದಲಿಗೆ ನಿಮ್ಮದೂ ಕೂಡ ಎಂದು ಹೇಳಿದೆ. ನಾಲ್ಕು ವರ್ಷಗಳ ಹಿಂದೆಯೇ ಡಿವಿಲಿಯರ್ಸ್ ಐಪಿಎಲ್ನಿಂದ ನಿವೃತ್ತರಾಗಿದ್ದರೂ, ಅವರು ಫ್ರಾಂಚೈಸಿಯಲ್ಲಿ ಹೆಚ್ಚಿನ ಬಾರಿ ಪಿಒಟಿಎಂ ಆಗಿದ್ದಾರೆ. ಅವರು ವೇದಿಕೆಯ ಮೇಲೆ ಇದ್ದು ಕಪ್ ಎತ್ತಲು ಅರ್ಹರು. ಈ ಗೆಲುವು ಅವರಿಗೆ ದೊಡ್ಡ ಗೆಲುವು. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ದೊಡ್ಡ ಪಂದ್ಯಾವಳಿಗಳು ಮತ್ತು ಕ್ಷಣಗಳನ್ನು ಗೆಲ್ಲಲು ಬಯಸುತ್ತೇನೆ. ಈ ರಾತ್ರಿ ನಾನು ಮಗುವಿನಂತೆ ಮಲಗುತ್ತೇನೆ.