Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

13/03/2026 12:05 PM

BREAKING : ಇರಾನ್ ಕ್ಷಿಪಣಿ ದಾಳಿಗೆ ಅಮೆರಿಕದ ಇಂಧನ ತುಂಬುವ ವಿಮಾನ ಪತನ : ಐವರು ಸಿಬ್ಬಂದಿ ಸಾವು!

13/03/2026 12:01 PM

ಬೆಂಗಳೂರಿನಲ್ಲಿ ಗ್ಯಾಸ್ ಗಂಡಾಂತರ: ಸಿಲಿಂಡರ್ ಅಭಾವದ ಬೆನ್ನಲ್ಲೇ ಕಳ್ಳರ ಹಾವಳಿ – ಸಿಲಿಂಡರ್ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

13/03/2026 12:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ
KARNATAKA

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

By kannadanewsnow0919/02/2025 4:32 PM

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಆ ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ಈ ವಿಷಯವನ್ನು ಜೀವಂತವಾಗಿಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದರು.

1984ರಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದು. ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದೇನೆ. ಅಂದಿನಿಂದಲೂ ಈ ಭೂಮಿಯ ಮೇಲೆ ಕೆಲವರ ಕಣ್ಣು ಬಿದ್ದಿದೆ. ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೇ ಮೂಲಕ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು.

2012ರಿಂದಲೂ ನನ್ನ ವಿರುದ್ದ ತನಿಖೆ ಮಾಡುತ್ತಿದ್ದಾರೆ. ಏನು ಸಿಕ್ಕಿಲ್ಲ. ನಾನು ಸಿದ್ದರಾಮಯ್ಯನವರ ರೀತಿ ಸರಕಾರಿ ಜಮೀನು ಲೂಟಿ ಮಾಡಿಲ್ಲ. ಈಗ ಆಗಿರುವ ಎಲ್ಲಾ ತನಿಖೆಗಳು ಸಾಕಾಗುವುದಿಲ್ಲ ಎಂದು ಈಗ IAS ಅಧಿಕಾರಿಗಳ ನೇತೃತ್ವದಲ್ಲಿ SIT ತನಿಖೆ ಮಾಡಿಸ್ತಿದ್ದಾರೆ. ಯಾವುದೇ ತನಿಖೆ ಮಾಡಲಿ, ನಾನು ಮುಕ್ತವಾಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

1986ರಲ್ಲಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ರಾಮಚಂದ್ರ ಅವರುಗಳು ಇದೇ ಜಮೀನು ವಿಷಯದಲ್ಲಿ ಆಗಿನ ಪ್ರಧಾನಮಂತ್ರಿ, ಗೃಹ ಮಂತ್ರಿಯವರಿಗೆ ಪತ್ರ ಬರೆದಿದ್ದರು. ತಮ್ಮ ದೂರಿನಲ್ಲಿ ಅವರು ಕುಮಾರಸ್ವಾಮಿ ಅವರು ಜಮೀನು ಖರೀದಿಸಿದ್ದಾರೆ ಎಂದು ಹೇಳಿದ್ದರೇ ಹೊರತು ಕಬಳಿಸಿದ್ದಾರೆ ಎಂದು ಆರೋಪ ಮಾಡಿರಲಿಲ್ಲ. ನಾನು ಖರೀದಿ ಮಾಡಿರುವ ಆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದೇನೆಯೇ ಹೊರತು ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸಿಲ್ಲ. ನಾನು ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ರಾಜ್ಯದ ಸಂಪತ್ತನ್ನು ರಕ್ಷಿಸುವವನ ರೀತಿ ವರ್ತಿಸುವ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಎನ್ನುವ ವ್ಯಕ್ತಿ ನನ್ನ ಜಮೀನು ವಿಷಯದ ಬಗ್ಗೆ ಆರೋಪ ಮಾಡಿದ್ದಾರೆ. ಆದರೆ, ರಾಜ್ಯ ಹೈಕೋರ್ಟ್ ನಿಂದ ನನಗೆ ಯಾವುದೇ ನೋಟೀಲ್ ಬಂದಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಈ ಸರಕಾರ ಕೆಲವರನ್ನು ಕರೆತಂದು ನನ್ನ ಮೇಲೆ ಆರೋಪ ಮಾಡಿಸುವ ಕೆಲಸ ಮಾಡುತ್ತಿದೆ. ಅವರೆಲ್ಲ ಈಗ ಎಲ್ಲಿಂದ ಉದ್ಭವ ಆದರು ಎಂದು ಗೊತ್ತಿಲ್ಲ. 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿಯನ್ನು ಅನೇಕ ಸಲ ಸರ್ವೇ ಮಾಡಿಕೊಂಡಿದ್ದಾರೆ. ಸರ್ವೇ ನಡೆಯುವಾಗ ಕೆಲವು ಕಾಂಗ್ರೆಸ್ ಪುಡಾರಿಗಳು ಕೆಲವರನ್ನು ಕರೆದುಕೊಂಡು ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡಿಸಿದ್ದಾರೆ. 40 ವರ್ಷಗಳಿಂದ ಯಾರೂ ನನ್ನ ಬಳಿ ಬಂದಿರಲಿಲ್ಲ. ಈಗ ಎಲ್ಲಿಂದ ಬಂದರು ದೂರುದಾರರು? ಎಂದು ಕೇಂದ್ರ ಸಚಿವರು ಕೇಳಿದರು.

ಕಾಂಗ್ರೆಸ್ ಸರಕಾರ ರಚನೆ ಮಾಡಿರುವ ಎಸ್ ಐಟಿ ನನಗೆ ಯಾವುದೇ ನೊಟೀಸ್ ನೀಡದೇ ಸರ್ವೇ ಮಾಡಲು ಹೊರಟಿತ್ತು. ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ನಾನು ಕರೆ ಮಾಡಿ ಮಾತನಾಡಿದೆ. ನೋಟಿಸ್ ಕೊಟ್ಟು ಸರ್ವೇ ಮಾಡಿ ಎಂದು ಹೇಳಿದ್ದೆ. ಜಾಗತಿಕ ಮಟ್ಟದ ಭೂಮಪಕರನ್ನು ಕರೆತಂದು ಸರ್ವೇ ಮಾಡಿಸಿಕೊಳ್ಳಿ ಎಂದು ಹೇಳಿದ್ದೆ. ನಾನು ಖರೀದಿ ಮಾಡಿರುವ ಭೂಮಿಯಲ್ಲಿ ಯಾವುದೇ ಅಕ್ರಮವಾಗಿಲ್ಲ. ಈ ರಾಜ್ಯದಲ್ಲಿ ಯಾರು ಯಾರು ಏನೇನು ಮಾಡಿದ್ದಾರೆ, ಎಷ್ಟೆಲ್ಲಾ ಭೂಮಿ ಲೂಟಿ ಹೊಡೆದಿದ್ದಾರೆ ಎಂಬುದಕ್ಕೆ ದೊಡ್ಡ ಇತಿಹಾಸವೇ ಇದೆ. ಅವರೆಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು, ತನಿಖಾ ವ್ಯವಸ್ಥೆಯನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಅವರ ಹಣೆಬರಹದ ದಾಖಲೆಗಳು ಕೂಡ ನನ್ನ ಬಳಿ ಇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಸಿಎಂ ಮೇಲೆ ವಾಗ್ದಾಳಿ ನಡೆಸಿದ ಹೆಚ್ಡಿಕೆ:

ದೇವೇಗೌಡರನ್ನು ಮೋದಿ ಅವರ ಚಿಯರ್ ಲೀಡರ್ ಎಂದು ಆಗೌರವದ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು; ದೇವೆಗೌಡರ ಬಗ್ಗೆ ಮಾತನಾಡುವ ಮುನ್ನ ಅವರು ತಮ್ಮ ಯೋಗ್ಯತೆ ಅರಿತುಕೊಂಡರೆ ಉತ್ತಮ ಎಂದು ಕಿಡಿ ಕಾರಿದರು.

ರಾಜ್ಯದ ನೀರಾವರಿಗೆ ದೇವೇಗೌಡರು ಏನು ಮಾಡಿದ್ದಾರೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯ ಏನು ಮಾಡಿದ್ದಾರೆ ಎನ್ನುವುದು ಜನರಿಗೆ ಗೊತ್ತಿದೆ. ದೇವೇಗೌಡರು ನೀರಾವರಿ ಬಗ್ಗೆ, ರಾಜ್ಯದ ಜನತೆಯ ರಕ್ಷಣೆ ಮಾಡುವುದಕ್ಕೆ ಇವರಿಂದ ಹೇಳಿಸಿಕೊಳ್ಳಬೇಕಿಲ್ಲ. ಸಿದ್ದರಾಮಯ್ಯ ಅವರೇ.. ಈ ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ನಿಮ್ಮ ಕೊಡುಗೆ ಏನು? ನೀರಾವರಿಗೆ ನಿಮ್ಮ ಕೊಡುಗೆ ಏನು? ಎಂದು

ಯಾವತ್ತಾದರೂ ಒಂದು ದಿನ ನೀರಿನ ಬಗ್ಗೆ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತಾಡಿದ್ದಾರಾ? ಎಲ್ಲಿಯಾದರೂ ಹೋರಾಟ ಮಾಡಿದ್ದರಾ? 102 ಡಿಗ್ರಿ ಜ್ವರ ಇದ್ದರೂ, ಕೈಯ್ಯಲ್ಲಿ ಐವಿ (iv) ಇದ್ದರೂ ರಾಜ್ಯಸಭೆಯಲ್ಲಿ ಗೋದಾವರಿ-ಕೃಷ್ಣ-ಕಾವೇರಿ ನದಿಗಳ ಜೋಡಣೆ ಯೋಜನೆ ಬಗ್ಗೆ ಮಾತಾಡಿದ್ದಾರೆ. ರಾಜ್ಯದ ನೀರಾವರಿ ಬಗ್ಗೆ ಇವರಿಂದ ದೇವೇಗೌಡರು ಹೇಳಿಸಿಕೊಳ್ಳಬೇಕಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ವಿರುದ್ದ ಸಚಿವರ ವಾಗ್ದಾಳಿ:

ತಮ್ಮ ಕೊಡುಗೆ ಬಗ್ಗೆ ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಸಚಿವ ಕುಮಾರಸ್ವಾಮಿ ಅವರು, ರಾಜ್ಯಕ್ಕೆ ಅವರ ಕೊಡುಗೆ ಏನು? ದುಡ್ಡು ಹೊಡೆದಿರುವುದೇ ಅವರ ಕೊಡುಗೆ. ಇನ್ನೊಂದು ವಾರ ನೋಡೋಣ‌. ಈ ಸರಕಾರ ಏನೇನು ಮಾಡುತ್ತದೆ ಎಂದು. ಆಮೇಲೆ ಮಾತನಾಡುತ್ತೇನೆ. ರಾಜ್ಯದ ಸಮಸ್ಯೆಗಳ ಬಗ್ಗೆ ಇವರ ಗಮನವೇ ಇಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರದಿಂದ ‘ಡಿಫೈನ್ಡ್ ಪಿಂಚಣಿ ಯೋಜನೆ’ಗೆ ಒಳಪಟ್ಟ ‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ

BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ

Share. Facebook Twitter LinkedIn WhatsApp Email

Related Posts

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

13/03/2026 12:05 PM2 Mins Read

ಬೆಂಗಳೂರಿನಲ್ಲಿ ಗ್ಯಾಸ್ ಗಂಡಾಂತರ: ಸಿಲಿಂಡರ್ ಅಭಾವದ ಬೆನ್ನಲ್ಲೇ ಕಳ್ಳರ ಹಾವಳಿ – ಸಿಲಿಂಡರ್ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

13/03/2026 12:00 PM1 Min Read

BREAKING : ರಾಜ್ಯದಲ್ಲಿ ಸಿಲಿಂಡರ್ ಕೊರತೆಯಿಲ್ಲ, ಜನರು ಆತಂಕ ಪಡೋದು ಬೇಡ : ಆಹಾರ ಇಲಾಖೆ ಸುತ್ತೋಲೆ!

13/03/2026 11:47 AM1 Min Read
Recent News

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

13/03/2026 12:05 PM

BREAKING : ಇರಾನ್ ಕ್ಷಿಪಣಿ ದಾಳಿಗೆ ಅಮೆರಿಕದ ಇಂಧನ ತುಂಬುವ ವಿಮಾನ ಪತನ : ಐವರು ಸಿಬ್ಬಂದಿ ಸಾವು!

13/03/2026 12:01 PM

ಬೆಂಗಳೂರಿನಲ್ಲಿ ಗ್ಯಾಸ್ ಗಂಡಾಂತರ: ಸಿಲಿಂಡರ್ ಅಭಾವದ ಬೆನ್ನಲ್ಲೇ ಕಳ್ಳರ ಹಾವಳಿ – ಸಿಲಿಂಡರ್ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

13/03/2026 12:00 PM

BREAKING : ರಾಜ್ಯದಲ್ಲಿ ಸಿಲಿಂಡರ್ ಕೊರತೆಯಿಲ್ಲ, ಜನರು ಆತಂಕ ಪಡೋದು ಬೇಡ : ಆಹಾರ ಇಲಾಖೆ ಸುತ್ತೋಲೆ!

13/03/2026 11:47 AM
State News
KARNATAKA

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

By kannadanewsnow5713/03/2026 12:05 PM KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ…

ಬೆಂಗಳೂರಿನಲ್ಲಿ ಗ್ಯಾಸ್ ಗಂಡಾಂತರ: ಸಿಲಿಂಡರ್ ಅಭಾವದ ಬೆನ್ನಲ್ಲೇ ಕಳ್ಳರ ಹಾವಳಿ – ಸಿಲಿಂಡರ್ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

13/03/2026 12:00 PM

BREAKING : ರಾಜ್ಯದಲ್ಲಿ ಸಿಲಿಂಡರ್ ಕೊರತೆಯಿಲ್ಲ, ಜನರು ಆತಂಕ ಪಡೋದು ಬೇಡ : ಆಹಾರ ಇಲಾಖೆ ಸುತ್ತೋಲೆ!

13/03/2026 11:47 AM

SHOCKING : ವಿದ್ಯಾರ್ಥಿನಿಯರ ಡ್ರೆಸ್ ಚೇಂಜ್ ಮಾಡೋ ಸ್ಥಳಕ್ಕೆ ಕಲ್ಲೇಸೆದ ಯುವಕನಿಗೆ ಥಳಿತ : ‘ಹೃದಯಘಾತದಿಂದ’ ಯುವಕ ಸಾವು!

13/03/2026 11:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.