ಬೆಂಗಳೂರು : ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ನಡಿಗೆ ಎಂದು ಸದಾನಂದ ಗೌಡ ಇದೆ ವೇಳೆ ತಿಳಿಸಿದರು.
ಭಾರತವು ತನ್ನ ಜನರ ಆಕಾಂಕ್ಷೆಗಳನ್ನು ಪೂರೈಸುವುದಲ್ಲದೆ ಜಗತ್ತಿಗೆ ಭರವಸೆಯನ್ನು ನೀಡುತ್ತದೆ”: ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಬೆಂಗಳೂರಿನಲ್ಲಿ ಸಂಸದ ಸದಾನಂದಗೌಡ ತಿಳಿಸಿದರು. ಕರ್ನಾಟಕದಲ್ಲಿ ಬಿಜೆಪಿ ಶುದ್ಧೀಕರಣ ಕಡೆಗೆ ನನ್ನ ನಡಿಗೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಬೆಂಗಳೂರಿನಲ್ಲಿ ಬಿಜೆಪಿ ಸಂಸದ ಡಿ ಬಿ ಸದಾನಂದ ತಿಳಿಸಿದರು.
ಭಾರತವು ತನ್ನ ಜನರ ಆಕಾಂಕ್ಷೆಗಳನ್ನು ಪೂರೈಸುವುದಲ್ಲದೆ ಜಗತ್ತಿಗೆ ಭರವಸೆಯನ್ನು ನೀಡುತ್ತದೆ”: ಪ್ರಧಾನಿ ಮೋದಿ
ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ ಹಾಗೂ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ಆದರೆ ನನ್ನ ಮುಂದಿನ ನಡೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಶುದ್ಧೀಕರಣ ಮಾಡುವುದು ನನ್ನ ಮುಖ್ಯ ಉದ್ದೇಶವಾಗಿದೆ. ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಸತ್ಯ ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.