ಬೆಂಗಳೂರು:2008ರ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರ ಕಾಲದಲ್ಲಿ ಮೈಶುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದ ನಾಗರಾಜಪ್ಪ ವಿರುದ್ದ ಭ್ರಷ್ಟಾಚಾರ ಆರೋಪ ಸಾಭೀತಾಗಿದ್ದು ಅವರ ವಿರುದ್ದ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಲು ಮುಂದಾಗಿದೆ.ನಾಗರಾಜಪ್ಪ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಆಪ್ತರಾಗಿದ್ದಾರೆ.
ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್ ಆಗಿದೆ.ಅವರಿಂದ ನಷ್ಟದ ಹಣ ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.
ಅವರ ಅವಧಿಯಲ್ಲಿ ಹೊಸ ಮಿಲ್ ಖರೀದಿ, ಡಿಸ್ಟಿಲರಿ ಮಾರಾಟ-ಸೋರಿಕೆ, ಮೈ ರಮ್, ಮೈ ವಿಸ್ಕಿ, ಸಕ್ಕರೆ ಮಾರಾಟದಲ್ಲಿ ಭಾರಿ ಅಕ್ರಮ, ಭ್ರಷ್ಟಾಚಾರ ಎಸಗಿದ್ದಾರೆ. ನಾಗರಾಜಪ್ಪ ಮೈಶುಗರ್ ಅಧ್ಯಕ್ಷರಾಗಿದ್ದ ವೇಳೆ ಕಾರ್ಖಾನೆಗೆ 121 ಕೋಟಿ ರೂ. ನಷ್ಟವಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.ಸದಾನಂದಗೌಡ ನೇತೃತ್ವದ ಸರ್ಕಾರ ಲೋಕಾಯುಕ್ತ ತನಿಖೆಗೆ ವಹಿಸಿದ್ದು, ತನಿಖೆ ವೇಳೆ ಅಕ್ರಮ, ಭ್ರಷ್ಟಾಚಾರ ಆರೋಪ ಸಾಭೀತಾಗಿತ್ತು.
ಆಪಾಧಿತ ಅಧ್ಯಕ್ಷ ನಾಗರಾಜಪ್ಪ ಮತ್ತು ಕುಟುಂಬದ ಆಸ್ತಿ ವಿವರದ ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಮೈಶುಗರ್ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್ ಪತ್ರ ಬರೆದಿದ್ದಾರೆ.