ಬೆಂಗಳೂರು: ಸೆ.26 ರಂದು ನಾಡಹಬ್ಬ ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ( President draupadi murmu ) ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹಾಗೂ ಈಗಾಗಲೇ ಮೈಸೂರು ದಸರಾಗೆ ಆಗಮಿಸುವ ಗಣ್ಯರ ಪಟ್ಟಿ ಬಹುತೇಕ ಅಂತಿಮವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ, ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮುಅವರಿಗೆ ದೆಹಲಿಯಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅಧಿಕೃತ ಆಹ್ವಾನ ನೀಡಲಿದ್ದಾರೆ. ಈ ಮೂಲಕ ಮೈಸೂರು ಜಿಲ್ಲಾಡಳಿತದಿಂದ ರಾಷ್ಟ್ರಪತಿ ಮುರ್ಮು ಅವರಿಗೆ ಮೈಸೂರು ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಸಿಗಲಿದೆ.
ವೇದಿಕೆಯಲ್ಲಿ ಭಾಗವಹಿಸುವ ಗಣ್ಯರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ 15 ಗಣ್ಯರಿಗೆ ಅವಕಾಶ ನೀಡಲಾಗಿದೆ.
ರಾಷ್ಟ್ರಪತಿ, ರಾಜ್ಯಪಾಲ, ಸಿಎಂ ಸೇರಿ 15 ಗಣ್ಯರಿಗೆ ಅವಕಾಶ ನೀಡಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ ವೇದಿಕೆಯಲ್ಲಿ ಆಸೀನರಾಗಲಿದ್ದಾರೆ. ಜೊತೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವರಾದ ಸುನಿಲ್ ಕುಮಾರ್, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್ ಹಾಗೂ ಶಾಸಕ ಜಿ.ಟಿ. ದೇವೇಗೌಡ, ಮೈಸೂರು ಮೇಯರ್ ಶಶಿಕುಮಾರ್ಗೆ ಸ್ಥಾನ ನೀಡಲಾಗಿದೆ.
ಈ ಮೊದಲು ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಇತ್ತೀಚೆಗಷ್ಟೇ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದರು.
ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ . ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಕ್ಷಣಗಣನೇ ಆರಂಭವಾಗಿದೆ. ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದರಸಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ.. ಮೈಸೂರು ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ 2022ರ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಕೊರೋನಾ ಹಿನ್ನೆಲೆ ಕಳೆದ 2021ರಲ್ಲಿ ಸರಳ ದಸರಾ ಆಚರಿಸಲಾಗಿತ್ತು. 2021ರ ಮೈಸೂರು ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಉದ್ಘಾಟಿಸಿದ್ದರು. ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು(president draupadi murmu) ಉದ್ಘಾಟನೆ ಮಾಡಲಿದ್ದಾರೆ.
ತರಗತಿಯಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಅಲ್ಲ: ಸುಪ್ರೀಂ ಕೋರ್ಟ್ಗೆ ಕರ್ನಾಟಕ ಎಜಿ ಮಾಹಿತಿ