ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ಅರಮನೆ ನಗರಿಯಲ್ಲಿ ತಯಾರಿ ಜೋರಾಗಿದೆ.
ಇಂದು ಮೈಸೂರಿನಲ್ಲಿ ಗಜಪಡೆಗಳಿಗೆ 3 ನೇ ಹಂತದ ಸಿಡಿಮದ್ದು ತಾಲೀಮು ನಡೆಯಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಸ್ತುಪ್ರದರ್ಶನ ಪ್ರಾಧಿಕಾರದ ಪಾರ್ಕಿಂಗ್ ಸ್ಥಳದಲ್ಲಿ ಗಜಪಡೆಗಳಿಗೆ 3 ನೇ ಹಂತದ ಸಿಡಿಮದ್ದು ತಾಲೀಮು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೆ.26 ರಂದು ನಾಡಹಬ್ಬ ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೆ.26 ರಂದು ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
BIG NEWS : ʻಅಕ್ಕಿʼ ಬೆಲೆಯಲ್ಲಿ ಮತ್ತೆ ಏರಿಕೆ ಸಾಧ್ಯತೆ: ಆಹಾರ ಸಚಿವಾಲಯದಿಂದ ಮಾಹಿತಿ