ಬೆಂಗಳೂರು: ಸೆ.26 ರಂದು ನಾಡಹಬ್ಬ ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸೆ.26 ರಂದು ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಹೀಗಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದ ಪಟ್ಟಿ
1) ಸೆ. 26 ರ ಬೆಳಗ್ಗೆ ದೆಹಲಿಯಿಂದ 6:15 ರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮನ
2) ಸೆ. 26 ರ ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮನ
3) ನಂತರ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿರುವ ದ್ರೌಪದಿ ಮುರ್ಮು
4) ಸೆ.26 ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ದಸರಾ ಉದ್ಘಾಟನೆ ನಂತರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ
5) ನಂತರ ಬೆಳಗ್ಗೆ 11:15 ಕ್ಕೆ ಮೈಸೂರಿನಿಂದ ವಾಪಸ್ ಹುಬ್ಬಳ್ಳಿಗೆ ಹೊರಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ವೇದಿಕೆಯಲ್ಲಿ ಭಾಗವಹಿಸುವ ಗಣ್ಯರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ 15 ಗಣ್ಯರಿಗೆ ಅವಕಾಶ ನೀಡಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲ, ಸಿಎಂ ಸೇರಿ 15 ಗಣ್ಯರಿಗೆ ಅವಕಾಶ ನೀಡಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ ವೇದಿಕೆಯಲ್ಲಿ ಆಸೀನರಾಗಲಿದ್ದಾರೆ. ಜೊತೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವರಾದ ಸುನಿಲ್ ಕುಮಾರ್, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್ ಹಾಗೂ ಶಾಸಕ ಜಿ.ಟಿ. ದೇವೇಗೌಡ, ಮೈಸೂರು ಮೇಯರ್ ಶಶಿಕುಮಾರ್ಗೆ ಸ್ಥಾನ ನೀಡಲಾಗಿದೆ.
ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ . ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಕ್ಷಣಗಣನೇ ಆರಂಭವಾಗಿದೆ. ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದರಸಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ.. ಮೈಸೂರು ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ 2022ರ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಕೊರೋನಾ ಹಿನ್ನೆಲೆ ಕಳೆದ 2021ರಲ್ಲಿ ಸರಳ ದಸರಾ ಆಚರಿಸಲಾಗಿತ್ತು. 2021ರ ಮೈಸೂರು ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಉದ್ಘಾಟಿಸಿದ್ದರು. ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು(president draupadi murmu) ಉದ್ಘಾಟನೆ ಮಾಡಲಿದ್ದಾರೆ.