Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರ ಅವಧಿ ಒಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರದ ಮಹತ್ವದ ಆದೇಶ

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

BIG NEWS: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್, ಟ್ರ್ಯಾಕಿಂಗ್ ಸಾಧನ ಕಡ್ಡಾಯ; ಸುಪ್ರೀಂ ಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ದಸರಾ-2025 : ಆನೆಗಳಿಗೆ ಕುಶಾಲತೋಪು ಸಿಡಿಸುವ ಫಿರಂಗಿ ತಾಲೀಮು ಹೇಗಿರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ
KARNATAKA

ಮೈಸೂರು ದಸರಾ-2025 : ಆನೆಗಳಿಗೆ ಕುಶಾಲತೋಪು ಸಿಡಿಸುವ ಫಿರಂಗಿ ತಾಲೀಮು ಹೇಗಿರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

By ಸುರೇಶ್‌

ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ಜಂಬೂ ಸವಾರಿಯ ದಿನ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವಾಗ ಸಾಂಪ್ರದಾಯಿಕ ಕುಶಾಲತೋಪುಗಳನ್ನು ಸಿಡಿಸಿ ಗೌರವ ಸಮರ್ಪಣೆ ಮಾಡುವುದು ಸಂಪ್ರದಾಯ. ಇಂತಹ ಕುಶಾಲತೋಪು ಸಿಡಿಸುವ ಕಾರ್ಯಕ್ರಮಕ್ಕೆ ಅರಮನೆಯ ಆನೆ ಬಾಗಿಲಿನಲ್ಲಿ ಫಿರಂಗಿ ಒಣ ತಾಲೀಮಿನ ಅಭ್ಯಾಸ ನಡೆಸಲಾಗುತ್ತಿದೆ.

ವಿಶ್ವವಿಖ್ಯಾತ ಜಂಬೂ ಸವಾರಿ ದಿನ ಅರಮನೆಯ ಹೊರಭಾಗದಲ್ಲಿ ಚಾಮುಂಡಿ ತಾಯಿ ಚಿನ್ನದ ಅಂಬಾರಿಯಲ್ಲಿ ಆನೆ ಮೇಲೆ ಆಸೀನಳಾಗಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಪುಷ್ಪಾರ್ಚನೆ ಮಾಡಿದ ತಕ್ಷಣ ಪೊಲೀಸ್ ಬ್ಯಾಂಡ್​ನಿಂದ ರಾಷ್ಟ್ರಗೀತೆ ನುಡಿಸುತ್ತಾರೆ. ಆ ಸಂದರ್ಭದಲ್ಲಿ ರಾಷ್ಟ್ರಗೀತೆ ನುಡಿಸುವಾಗ 52 ಸೆಕೆಂಡ್​ಗಳಲ್ಲಿ 21 ಸುತ್ತು ಕುಶಾಲತೋಪುಗಳನ್ನು 7 ಫಿರಂಗಿಗಳಿಂದ ಹಾರಿಸಲಾಗುತ್ತದೆ.

ನಗರದ ಸಶಸ್ತ್ರ ಪಡೆಯ 31 ನುರಿತ ಸಿಬ್ಬಂದಿ ಕುಶಾಲತೋಪು ಸಿಡಿಸುವ ತಾಲೀಮಿಗೆ ಅಭ್ಯಾಸ ನಡೆಸುವುದೇ ಒಣ ತಾಲೀಮು. ಅರಮನೆಯ ಮುಂಭಾಗದ ಆನೆ ಬಾಗಿಲಿನಲ್ಲಿ ಫಿರಂಗಿಗಳ ಕುಶಾಲತೋಪು ತಾಲೀಮನ್ನು ಪ್ರತಿನಿತ್ಯ ನಡೆಸುತ್ತಾರೆ. ಬಳಿಕ ಗಜಪಡೆಗೆ 3 ಸುತ್ತು ಸಿಡಿಮದ್ದು ಸಿಡಿಸಿ, ಸಿಡಿಮದ್ದು ತಾಲೀಮನ್ನು ನಡೆಸುತ್ತಾರೆ. ಏಕೆಂದರೆ ಜಂಬೂ ಸವಾರಿಯ ದಿನ ಗಜಪಡೆ ಶಬ್ದಕ್ಕೆ ಹೆದರದೇ ಇರಲಿ, ಸುಸೂತ್ರವಾಗಿ ಜಂಬೂ ಸವಾರಿ ತಾಲೀಮು ನಡೆಯಲಿ ಎಂಬ ಉದ್ದೇಶವಾಗಿದೆ.

1260 ರಲ್ಲಿ ಚೀನಿಯರು ಆವಿಷ್ಕರಿಸಿದರು

ಸುಮಾರು 12ನೇ ಶತಮಾನದಿಂದ ಆರಂಭವಾದ ಬಗ್ಗೆ ಮಾಹಿತಿ ಸಿಗುತ್ತದೆ. ಇದನ್ನು ಮೊಟ್ಟ ಮೊದಲಿಗೆ 1260 ರಲ್ಲಿ ಚೀನಿಯರು ಆವಿಷ್ಕರಿಸಿ ಶತ್ರುಗಳನ್ನು ಹಿಮ್ಮೆಟ್ಟಿಸಿದರು ಎನ್ನಲಾಗುತ್ತದೆ. ಅದಾದ ನಂತರ 13ನೇ ಶತಮಾನದಲ್ಲಿ ಲಿಬಿಯಾ ದೇಶವು ಸ್ಪೇನ್ ದೇಶದ ವಿರುದ್ಧದ ಯುದ್ಧದಲ್ಲಿ ಪ್ರಪ್ರಥಮವಾಗಿ ಫಿರಂಗಿಯನ್ನು ಬಳಸಿತು ಎಂಬ ಮಾಹಿತಿಗಳಿವೆ. ಇದಾದ ಬಳಿಕ 16ನೇ ಶತಮಾನದಲ್ಲಿ ಸುಧಾರಿತ ಫಿರಂಗಿಗಳ ನಿರ್ಮಾಣ ನಡೆದುದನ್ನು ಕಾಣಬಹುದಾಗಿದೆ.

ಟಿಪ್ಪು ಸುಲ್ತಾನ್ ಕಾಲದಲ್ಲಿ ಫಿರಂಗಿಗಳು ಇನ್ನಷ್ಟು ಸುಧಾರಣೆ ಕಂಡು ಸುಮಾರು 10 ಅಡಿ ಉದ್ದ, 9,100 ಕೆ.ಜಿ ತೂಕದ ಉಕ್ಕಿನ ಫಿರಂಗಿಗಳನ್ನು ತಮ್ಮ ಆಡಳಿತಾವಧಿಯಲ್ಲಿ ಯುದ್ಧದಲ್ಲಿ ಬಳಸಲಾಯಿತು. ಅವತ್ತಿನ ಫಿರಂಗಿ ಇವತ್ತಿಗೂ ಈಗಲೂ ಶ್ರೀರಂಗಟ್ಟಣದ ದರಿಯಾ ದೌಲತ್ ಅರಮನೆಯ ಮುಂಭಾಗದಲ್ಲಿದೆ.

ಫಿರಂಗಿಯಿಂದ 21 ಬಾರಿ ಕುಶಾಲತೋಪು

ಅಂದು ಮೈಸೂರು ರಾಜರ ಶಕ್ತಿಯಾಗಿ ಹೋರಾಟದಲ್ಲಿ ಗಮನಸೆಳೆದಿದ್ದ ಫಿರಂಗಿಗಳು ಈಗ ಮ್ಯೂಸಿಯಂ ಸೇರಿವೆ. ದಸರಾ ಸಂದರ್ಭದಲ್ಲಿ ಹೊರತೆಗೆದು ಸ್ವಚ್ಛಗೊಳಿಸಿ ವಿಜಯ ಗಣಪತಿ ಪೂಜೆ ಸಲ್ಲಿಸುವ ಮೂಲಕ ಕುಶಾಲ ತೋಪು ಸಿಡಿಸಲು ಮತ್ತು ಮೆರವಣಿಗೆಗೆ ಅದಕ್ಕೂ ಮೊದಲು ಗಜಪಡೆ ಮತ್ತು ಕುದುರೆಗಳು ಬೆದರದಂತೆ ಸಿಡಿಮದ್ದು ತಾಲೀಮಿಗೆ ಬಳಸಿಕೊಳ್ಳಲಾಗುತ್ತಿದೆ.

ಇನ್ನು ದಸರಾ ಜಂಬೂಸವಾರಿ ಹೊರಡುವ ಸಂದರ್ಭ ಅಂಬಾರಿಯಲ್ಲಿ ವೀರಾಜಮಾನಳಾದ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವಾಗ ರಾಷ್ಟ್ರಗೀತೆ ಆರಂಭಿಸಿ ಅದು ಮುಗಿಯುವುದರೊಳಗಾಗಿ 21 ಬಾರಿ ಕುಶಾಲ ತೋಪುಗಳನ್ನು ಇದೇ ಫಿರಂಗಿಯಿಂದ ಸಿಡಿಸಲಾಗುತ್ತದೆ. ಫಿರಂಗಿ ಮೂಲಕ ಕುಶಾಲತೋಪು ಸಿಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಇದಕ್ಕಾಗಿ ತರಬೇತಿ ಬೇಕಾಗುತ್ತದೆ.

ಕುಶಾಲು ತೋಪು ಹೇಗೆ ಸಿಡಿಸುತ್ತಾರೆ ಗೊತ್ತಾ?

ಫಿರಂಗಿ ಸಿಡಿಸುವಾಗ ಬಹಳಷ್ಟು ಅವಘಡ ಸಂಭವಿಸಿದೆ. ಹೀಗಾಗಿ ಸಿಬ್ಬಂದಿಗೆ ವಿಮೆ ಮಾಡಿಸುವ ಯೋಜನೆ ಜಾರಿಗೆ ಬಂದಿದೆ. ಇಷ್ಟಕ್ಕೂ ಫಿರಂಗಿಯಲ್ಲಿ ಕುಶಾಲತೋಪು ಸಿಡಿಸುವುದಾದರೂ ಹೇಗೆ ಎನ್ನುವುದನ್ನು ನೋಡುವುದಾದರೆ ಸುಮಾರು ಮೂರೂವರೆ ಅಡಿ ಉದ್ದದ ಫಿರಂಗಿ ಕೊಳವೆಗೆ ಹದಮಾಡಿದ ಸುಮಾರು ಮೂರು ಕಿಲೋಗ್ರಾಂ ನಷ್ಟು ರಂಜಕದ ಪುಡಿಯನ್ನು ಹತ್ತಿ ಬಟ್ಟೆಯಲ್ಲಿ ಸುತ್ತಿ ಆಯತಕಾರದ ಪೊಟ್ಟಣದಂತೆ ಮಾಡಲಾಗುತ್ತದೆ. ಅದನ್ನು ಕೊಳವೆಗೆ ಹಾಕಿ ನಂತರ ಕಬ್ಬಿಣದ ಸಾಧನವೊಂದರ ಮೂಲಕ ತಳ್ಳಿ ಗಟ್ಟಿಗೊಳಿಸಲಾಗುತ್ತದೆ. ನಂತರ ಅದಕ್ಕೆ ಬೆಂಕಿ ಹಚ್ಚಿದಾಗ ಅದು ಭಾರೀ ಶಬ್ಧದೊಂದಿಗೆ ಸ್ಫೋಟಗೊಳ್ಳುತ್ತದೆ.

ಇದಾದ ನಂತರ ಮತ್ತೆ ಆ ಬಿಸಿಯಿರುವ ಕೊಳವೆಯನ್ನು ಸಿಂಬ ಎಂಬ ಸಾಧನದಿಂದ ಸ್ವಚ್ಛಗೊಳಿಸುತ್ತಾರೆ. ಇದು ಸುಲಭದ ಕೆಲಸವಲ್ಲ. ಏಕೆಂದರೆ ಇಲ್ಲಿ ಒಂದೇ ಚಿಕ್ಕ ಕಿಡಿಯಿದ್ದರೂ ಮತ್ತೆ ಮದ್ದು ತುಂಬಿಸುವಾಗ ಸ್ಫೋಟಗೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈಗಾಗಲೇ ಕುಶಾಲ ತೋಪು ಸಿಡಿಸುವಾಗ ಅವಘಡಗಳು ಸಂಭವಿಸಿ ಅದನ್ನು ಸಿಡಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆಗಳೂ ಹಲವಷ್ಟು ನಡೆದಿರುವುದನ್ನು ನಾವು ಕಾಣಬಹುದಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

1 Min Read

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

2 Mins Read

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

1 Min Read
Recent News

BREAKING: ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರ ಅವಧಿ ಒಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರದ ಮಹತ್ವದ ಆದೇಶ

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

BIG NEWS: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್, ಟ್ರ್ಯಾಕಿಂಗ್ ಸಾಧನ ಕಡ್ಡಾಯ; ಸುಪ್ರೀಂ ಕೋರ್ಟ್

ಹರೀಶ್ ರಾಣಾ ಸಾವು ಜೀವನ ಮತ್ತು ಮರಣ ಎರಡರಲ್ಲೂ ಘನತೆಯ ಸಂಕೇತ: ಸುಪ್ರೀಂ ಕೋರ್ಟ್

State News
KARNATAKA

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

By kannadanewsnow57 KARNATAKA 1 Min Read

ತುಮಕೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರ (Licensed Surveyors) ಸೇವೆಯನ್ನು ಕಾಯಂ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ…

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.