ಮೈಸೂರು : ಸೆ.26 ರಂದು ಅಂದರೆ ನಾಳೆ ನಾಡಹಬ್ಬ  ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.  ಹಿನ್ನೆಲೆ ಅರಮನೆ ನಗರಿಯಲ್ಲಿ ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿದೆ.

ಈ ಹಿನ್ನೆಲೆ  ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದವರು ‘ ಮೈಸೂರು ನಗರ ಅಧಿಕಾರಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ  ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಮೈಸೂರು ನಗರ ದಿಂದ 1255, ಹೊರ ಜಿಲ್ಲೆಗಳಿಂದ 3580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು , 650 ಗೃಹ ರಕ್ಷಕ ಸಿಬ್ಬಂದಿಗಳು ಸೇರಿ ಒಟ್ಟು 5485 ಮಂದಿ ಪೊಲೀಸರನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮೊಬೈಲ್ ಕಮಾಂಡ್ ಸೆಂಟರ್ ಬಸ್ ನ್ನು ಬಳಕೆ ಮಾಡಲಾಗುತ್ತಿದ್ದು, ಈ ಬಸ್ಸಿನಲ್ಲಿ ಸಿಸಿಟಿವಿ ವ್ಯವಸ್ಥೆ , ಬಾಡಿ ಪೋರ್ಸ್ ಕ್ಯಾಮರಾ ಹಾಗೂ ವಿಡಿಯೋಗ್ರಾಫಿ ತೆಗೆಯುವ ವ್ಯವಸ್ಥೆ  ಮಾಡಲಾಗಿದೆ .ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಹಾಗೂ ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಳ್ಳಿ ರಥದಲ್ಲಿರುವ  ಪಂಚಲೋಹದ ಮಹಿಷಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಮೈಸೂರು ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ಮೈಸೂರು ನಗರದೆಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಭದ್ರತೆಗಾಗಿ 500 ಕ್ಕೂ ಹೆಚ್ಚು ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಸೆ.26 ರಂದು ವಿಶೇಷ ವಿಮಾನದ ಮೂಲಕ  ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು  ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

BREAKING NEWS : ಬಾಂಗ್ಲಾದಲ್ಲಿ ಘೋರ ದೋಣಿ ದುರಂತ ; ಕನಿಷ್ಠ 23 ಜನ ಸಾವು, ಡಜನ್ ಗಟ್ಟಲೆ ಮಂದಿ ನಾಪತ್ತೆ |Boat Accident

ಶಿವಮೊಗ್ಗ: ವಿದ್ಯುತ್ ತಂತಿ ಸಿಲುಕಿ ಎರಡು ಆನೆಗಳು ಸಾವು

Share.
Exit mobile version