Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM

ಚಪಾತಿ ಮೃದುವಾಗಿರ್ಬೇಕಾ.? ಹಾಗಿದ್ರೆ, ಹಿಟ್ಟು ಕಲಿಸುವಾಗ ಈ ಟ್ರಿಕ್ ಟ್ರೈ ಮಾಡಿ!

01/09/2025 9:09 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್ ಅವರೇ ಉದ್ಘಾಟನೆ- ಸಿಎಂ ಸಿದ್ಧರಾಮಯ್ಯ
KARNATAKA

ಮೈಸೂರು ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್ ಅವರೇ ಉದ್ಘಾಟನೆ- ಸಿಎಂ ಸಿದ್ಧರಾಮಯ್ಯ

By kannadanewsnow0931/08/2025 2:48 PM

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಒಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ಧರ್ಮ ಧರ್ಮಾಂಧರು ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು.

ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ?

ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆಯೇ ಹೊರತಾಗಿ ಜಾತ್ಯಾತೀತವಾಗಿ ಮಾತನಾಡುವುದಿಲ್ಲ. ಜನ ಸಾಹಿತ್ಯ ಸಮ್ಮೇಳನದಲ್ಲಿ ನಾನು ಮುಷ್ತಾಕ್ ಅವರು ಕನ್ನಡ ತಾಯಿಯ ಬಗ್ಗೆ ಗೌರವವಿಲ್ಲದೆ ಮಾತನಾಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ ಎಂದರು. ಬಿಜೆಪಿಯವರು ಕುಂಟು ನೆಪವನ್ನು ಹುಡುಕುತ್ತಿದ್ದಾರೆ ಎಂದರು.

ಢೋಂಗಿಗಳ ಮಾತು

ದನದ ಮಾಂಸ ತಿಂದು ಬರುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಇದೆಲ್ಲಾ ಢೋಂಗಿಗಳು ಮಾತನಾಡುವುದು, ಅವರು ಮಾತನಾಡುವುದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ದೀಪಾ ಭಾಸ್ತಿಯವರನ್ನು ಸನ್ಮಾನಿಸಲಾಗಿದೆ

ಎದೆಯ ಹಣತೆ ಭಾಷಾಂತರ ಮಾಡಿದ ದೀಪಾ ಭಾಸ್ತಿಯವರಿಗೂ ಅರಮನೆಯ ಮುಂದೆ ಗೌರವ ಸಲ್ಲಿಸಬೇಕಿತ್ತು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಸರ್ಕಾರ ಈಗಾಗಲೇ ದೀಪಾ ಭಾಸ್ತಿ ಹಾಗೂ ಭಾನು ಮುಸ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂಗಳನ್ನು ನೀಡಿ ಇಬ್ಬರನ್ನು ಸರ್ಕಾರ ಸನ್ಮಾನಿಸಿ, ಗೌರವಿಸಿದೆ ಎಂದರು.

ಧರ್ಮಯಾತ್ರೆ: ಬಿಜೆಪಿಯವರದ್ದು ಎಲ್ಲದರಲ್ಲೂ ರಾಜಕೀಯ

ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಳ್ಳುತ್ತಿರುವ ಬಗ್ಗೆ ಮಾತನಾಡಿ ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ. ಯಾತ್ರೆ ಹೋದರೆ ಹೋಗಲಿ. ಎಸ್ ಐ.ಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ. ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್ ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ಬಿಜೆಪಿಯವರು ಕೂಡ ಇದನ್ನು ಸ್ವಾಗತಿಸಿದ್ದರು. ಈಗ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮ ಗೊತ್ತಿಲ್ಲ ಎಂದರು.

ಜಿಎಸ್ ಟಿ ಎರಡು ಸ್ಲ್ಯಾಬ್ : ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟ

ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ.

ಸಿನ್ ಗೂಡ್ಸ್ ಮೇಲೆ ಸೆಸ್ ಹಾಕಿ ಪರಿಹಾರ ಒದಗಿಸಲು ಜಿಎಸ್ ಟಿ ಮಂಡಳಿಗೆ ಸಲಹೆ

2017 ರಲ್ಲಿ ಜಿಎಸ್ ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು 12% ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದರು.

ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಬಿಜೆಪಿ ಯಾವಾಗ ಧ್ವನಿ ಎತ್ತಿದ್ದಾರೆ?

ಜಿಎಸ್‌ಟಿ ವಿಚಾರವಾಗಿ ರಾಜ್ಯದ ಸಚಿವರು ಹಾಗೂ ಸಂಸದರು ನಿಯೋಗ ತರಳಲಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯ ಸಂಸದರು ಎಂದಿಗೂ ಇದನ್ನು ಒತ್ತಾಯಿಸುವುದಿಲ್ಲ. ಕರ್ನಾಟಕಕ್ಕೆ 11950 ಕೋಟಿಗಳು ನಷ್ಟವಾಯಿತು. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಿಯೇ ಇಲ್ಲ. ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದ್ದಾರೆ. ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಯಾವಾಗ ಮಾತನಾಡಿದ್ದಾರೆ? ಧರ್ಮಸ್ಥಳದ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಸಮನಾಗಿ ಆಸ್ತಿ ನೋಂದಣಿ ಹೆಚ್ಚಳ

ಆಸ್ತಿ ನೋಂದಣಿ ಶುಲ್ಕ ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಸಮಾನವಾಗಿ ಶೇಕಡ ಒಂದರಷ್ಟನ್ನು ಹೆಚ್ಚಿಸಲಾಗಿದೆ ಎಂದರು.

ಧರ್ಮಸ್ಥಳ ಪ್ರಕರಣ: ಬೇರೆ ತನಿಖೆ ಅಗತ್ಯವಿಲ್ಲ

ಧರ್ಮಸ್ಥಳದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂಬ ಬಿಜೆಪಿ ಒತ್ತಾಯವಿರುವ ಬಗ್ಗೆ ಮಾತನಾಡಿ ಬಿಜೆಪಿ ಅಧಿಕಾರದಲ್ಲಿದ್ದು, ಸಿಬಿಐ ಗೆ ಯಾವ ಪ್ರಕರಣವನ್ನು ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು. ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದರು. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದರು.

ಧರ್ಮಸ್ಥಳ: ಸತ್ಯ ತಿಳಿಯಬೇಕಿದೆ

ತನಿಖೆ ನಡೆಯುವಾಗ ಎಲ್ಲಾ ಪಕ್ಷಗಳು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿ ಧರ್ಮದ ಪರವಾಗಿ ಯಾತ್ರೆ ಮಾಡುತ್ತಿದ್ದು, ದೂರಿನ ಆಧಾರದ ಮೇಲೆ ಸತ್ಯವನ್ನು ತಿಳಿಯಬೇಕಾಗಿದೆ ಎಂದರು.

ದಸರಾ ಏರ್ ಶೋ ವಿಜಯದಶಮಿ ದಿನವೇ ನಡೆಯಲಿದೆ ಎಂದರು.

ಸಂಸತ್ ಆವರಣದಲ್ಲಿ ಜಗನ್ನಾಥ ರಥಯಾತ್ರೆಯ ರಥದ ಚಕ್ರಗಳನ್ನು ಅಳವಡಿಕೆ

ಧರ್ಮ, ಪೂಜೆ ಹಾಗೂ ಭಕ್ತಿ ಪ್ರದರ್ಶನಕ್ಕೆ ಇರುವುದಲ್ಲ, ಆತ್ಮವಿಶ್ವಾಸಕ್ಕೆ ಹುಟ್ಟಿದ ದಾರಿಗಳು: ಡಿಕೆಶಿ

Share. Facebook Twitter LinkedIn WhatsApp Email

Related Posts

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM2 Mins Read

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM1 Min Read

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM1 Min Read
Recent News

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

01/09/2025 9:22 PM

ಚಪಾತಿ ಮೃದುವಾಗಿರ್ಬೇಕಾ.? ಹಾಗಿದ್ರೆ, ಹಿಟ್ಟು ಕಲಿಸುವಾಗ ಈ ಟ್ರಿಕ್ ಟ್ರೈ ಮಾಡಿ!

01/09/2025 9:09 PM

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM
State News
KARNATAKA

ರಾಜ್ಯ ‘ಸರ್ಕಾರಿ ಆಸ್ಪತ್ರೆ ಒಳರೋಗಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ವಿಶೇಷ ಪೌಷ್ಟಿಕ ಆಹಾರ’

By kannadanewsnow0901/09/2025 9:22 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ…

BREAKING: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಎಸ್. ಡೇವಿಡ್ ಹೃದಯಾಘಾತದಿಂದ ನಿಧನ | SS David No More

01/09/2025 9:09 PM

ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ

01/09/2025 9:06 PM

BIG NEWS: ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್

01/09/2025 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.