Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತವನ್ನ ಬೆದರಿಸಿದ್ದಾಯ್ತು, ಈಗ ಜಗತ್ತನ್ನೇ ಬೇಡಿಕೊಳ್ತಿದೆ’ : ರಷ್ಯಾದ ತೈಲದ ವಿಚಾರದಲ್ಲಿ ಟ್ರಂಪ್ ಕೆಣಕಿದ ಇರಾನ್

14/03/2026 3:42 PM

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM

BREAKING : ಏರ್ ಇಂಡಿಯಾ, ಇಂಡಿಗೋ ಬಳಿಕ ಸರ್ಚಾರ್ಜ್ ಹೆಚ್ಚಿಸಿದ ‘ಆಕಾಶ ಏರ್’ ; 199 ರೂ.ರಿಂದ 1300 ರೂ.ಗೆ ಏರಿಕೆ!

14/03/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ
KARNATAKA

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

By kannadanewsnow0910/02/2026 6:06 AM

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಅವರ ಈ ಕೆಲಸವು ಮಂಗಳವಾರದಿಂದ (ಫೆ.10) ವಿಧ್ಯುಕ್ತವಾಗಿ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಪಾರಂಪರಿಕ ಹೆಮ್ಮೆಯ ಉತ್ಪನ್ನವಾಗಿರುವ ಮೈಸೂರು ಸ್ಯಾಂಡಲ್ ಸೋಪನ್ನು ನವನವೀನ ರೂಪದಿಂದಿಗೆ ಬಿಡುಗಡೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಸೋಮವಾರ ಈ ಬಗ್ಗೆ ಮಾತನಾಡಿರುವ ಅವರು, `ಕೆ.ಎಸ್.ಡಿ.ಎಲ್. ಸಂಸ್ಥೆಯ ವಾರ್ಷಿಕ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಯುವಜನಾಂಗವನ್ನು ತಲುಪಲು ವ್ಯಾಪಕ ಪ್ರಸಾರ ಆಂದೋಲವನ್ನು ನಡೆಸಲಾಗುತ್ತಿದೆ. ಇದಕ್ಕಾಗಿ, ಸೋಶಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋಯರ್ಸ್ ಗಳನ್ನು ಹೊಂದಿರುವ ತಾರಾ ವರ್ಚಸ್ಸಿನ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಮೂಲಕ ಉತ್ತರ ಭಾರತದಲ್ಲಿ ಕೂಡ ಪ್ರತಿಷ್ಠಿತ ಮೈಸೂರು ಸ್ಯಾಂಡಲ್ ಸೋಪ್ ಸಹಿತ ನಮ್ಮ ಸಂಸ್ಥೆಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೃಷ್ಟಿಸಿಕೊಳ್ಳಲಾಗುವುದು’ ಎಂದಿದ್ದಾರೆ.

ಕೆ.ಎಸ್.ಡಿ.ಎಲ್ ಸಂಸ್ಥೆಗೆ ಶತಮಾನಕ್ಕೂ ಮೀರಿದ ಭವ್ಯ ಪರಂಪರೆ ಇದೆ. ಇದು ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯ ಮತ್ತು ಕೈಗಾರಿಕಾ ರಸಾಯನಶಾಸ್ತ್ರಜ್ಞ ಎಸ್.ಜಿ.ಶಾಸ್ತಿ (ಸೋಪ್ ಶಾಸ್ತ್ರಿ) ಅವರ ದೂರದೃಷ್ಟಿಯಿಂದ ಅಸ್ತಿತ್ವಕ್ಕೆ ಬಂದ ಉದ್ಯಮವಾಗಿದೆ. ಒಳ್ಳೆಯ ವಹಿವಾಟು ಮತ್ತು ಲಾಭವನ್ನು ಕಾಣುತ್ತಿರುವ ಸಂಸ್ಥೆಯು ಹೋದ ತಿಂಗಳು ಸಾಬೂನು, ಮಾರ್ಜಕ ಮತ್ತು ಸೌಂದರ್ಯವರ್ಧಕ ಈ ಮೂರು ವಿಭಾಗಗಳಲ್ಲೂ ಸಾರ್ವಕಾಲಿಕ ಉತ್ಪಾದನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಯಲ್ಲಿ ಈಗ ಒಟ್ಟು 57 ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಇದರಲ್ಲಿ ಮೈಸೂರು ಸ್ಯಾಂಡಲ್ ಸೋಪಿನಿಂದ ಹಿಡಿದು ಕುಡಿಯುವ ನೀರಿನವರೆಗೂ ವ್ಯಾಪ್ತಿ ಇದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಕೆಎಸ್ಡಿಎಲ್ ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮ ಇತ್ಯಾದಿಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಅವರು ಉಳಿದ ಖಾಸಗಿ ಕಂಪನಿಗಳ ಇದೇ ತರಹದ ಉತ್ಪನ್ನಗಳ ಪ್ರಚಾರಾರ್ಥ ರೂಪದರ್ಶಿಯಾಗಿ ಕಾಣಿಸಿಕೊಳ್ಳುವುದಿಲ್ಲ ಎಂದು ಅವರು ನುಡಿದಿದ್ದಾರೆ.

ಮೈಸೋಪು ಸೇರಿದಂತೆ ಸಂಸ್ಥೆಯ ಶವರ್ ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್ ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ಪ್ರಚಾರಾರ್ಥವಾಗಿ ಸಿದ್ಧಪಡಿಸಿರುವ ವಿಡಿಯೋ ಇತ್ಯಾದಿಗಳನ್ನು ಕೂಡ ಮಂಗಳವಾರ ಬಿಡುಗಡೆ ಮಾಡಲಾಗುವುದು. ಜತೆಗೆ ವಿಜಯಪುರ ಮತ್ತು ಡಾಬಸಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ. ಜೊತೆಗೆ ಈಗ 25-30 ಕೋಟಿ ರೂ. ಆಸುಪಾಸಿನಲ್ಲಿರುವ ರಫ್ತು ವಹಿವಾಟನ್ನು ಮುಂದಿನ ದಿನಗಳಲ್ಲಿ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

ಕೆಎಸ್ ಡಿಎಲ್ ಸಂಸ್ಥೆಯ ಅಧ್ಯಕ್ಷರೂ ಆದ ಶಾಸಕ ಸಿ ಎಸ್ ಅಪ್ಪಾಜಿ ನಾಡಗೌಡ ಮಾತನಾಡಿ, `ಯಾವುದೇ ಹೊಸ ಸಾಧನ ಸಲಕರಣೆಗಳನ್ನು ಖರೀದಿಸದೆ, ಹಳೆಯ ಯಂತ್ರೋಕರಣಗಳನ್ನು ಬಳಸಿಕೊಂಡೇ ಸಂಸ್ಥೆಯಲ್ಲಿ ಉತ್ಪಾದನಾ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಕಟ್ಟುನಿಟ್ಟಾಗಿ ದಿನಕ್ಕೆ ಮೂರು ಪಾಳಿಯ ಕೆಲಸದ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ಯೂರೋಪ್ ಮತ್ತು ಮಧ್ಯ ಪ್ರಾಚ್ಯದ ದೇಶಗಳ ಮಾರುಕಟ್ಟೆಯೂ ನಮ್ಮ ಗಮನಲ್ಲಿದೆ. ಜತೆಗೆ ಅನಿವಾಸಿ ಕನ್ನಡಿಗರಿಗೂ ಸಂಸ್ಥೆಯ ಉತ್ಪನ್ನಗಳನ್ನು ತಲುಪಿಸುವ ಹಾಗೆ ನೋಡಿಕೊಳ್ಳಲಾಗುವುದು’ ಎಂದಿದ್ದಾರೆ.

ಮುಖ್ಯವಾಗಿ, ಮೈಸೂರು ಸ್ಯಾಂಡಲ್ ಸೋಪಿನ ನಕಲನ್ನು ಮಟ್ಟ ಹಾಕಲಾಗಿದೆ. ನಮ್ಮ ಉತ್ಪನ್ನಗಳು ಸದ್ಯಕ್ಕೆ ದಕ್ಷಿಣ ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿವೆ. ಮಾರುಕಟ್ಟೆ ವಿಸ್ತರಣೆಗೆ ದೆಹಲಿ, ಮಧ್ಯ ಭಾರತ ಮುಂತಾದ ಭಾಗಗಳ ಮೇಲೆ ಹೆಚ್ಚಿನ ಒತ್ತು ಕೊಡಲಾಗಿದೆ. 2025-26ರಲ್ಲಿ ಸಂಸ್ಥೆಯ ವಹಿವಾಟು 2 ಸಾವಿರ ಕೋಟಿ ರೂ. ಮುಟ್ಟುವ ನಿರೀಕ್ಷೆ ಇದೆ ಎಂದು ಕೆಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM2 Mins Read

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM1 Min Read

BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

14/03/2026 3:10 PM1 Min Read
Recent News

‘ಭಾರತವನ್ನ ಬೆದರಿಸಿದ್ದಾಯ್ತು, ಈಗ ಜಗತ್ತನ್ನೇ ಬೇಡಿಕೊಳ್ತಿದೆ’ : ರಷ್ಯಾದ ತೈಲದ ವಿಚಾರದಲ್ಲಿ ಟ್ರಂಪ್ ಕೆಣಕಿದ ಇರಾನ್

14/03/2026 3:42 PM

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM

BREAKING : ಏರ್ ಇಂಡಿಯಾ, ಇಂಡಿಗೋ ಬಳಿಕ ಸರ್ಚಾರ್ಜ್ ಹೆಚ್ಚಿಸಿದ ‘ಆಕಾಶ ಏರ್’ ; 199 ರೂ.ರಿಂದ 1300 ರೂ.ಗೆ ಏರಿಕೆ!

14/03/2026 3:21 PM

ಮೊಸರು ಬೇಗನೆ ಹಾಳಾಗುತ್ತದೆಯೇ? ಹೀಗೆ ಸಂಗ್ರಹಿಸಿದರೆ, ಒಂದು ವಾರ ತಾಜಾವಾಗಿರುತ್ತದೆ!

14/03/2026 3:15 PM
State News
KARNATAKA

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

By kannadanewsnow0914/03/2026 3:24 PM KARNATAKA 2 Mins Read

ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2…

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM

BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

14/03/2026 3:10 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.