Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪ್ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್ ಘೋಷಣೆ
KARNATAKA

BIG NEWS: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪ್ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್ ಘೋಷಣೆ

By kannadanewsnow0911/01/2025 7:11 PM

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮಾತನಾಡಿ, ವಿಜಯಪುರದಲ್ಲಿ ಕೂಡ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು, ತಮ್ಮ ಯೋಜನೆಯನ್ನು ಪ್ರಕಟಿಸಿದರು. ಶಾಸಕ ಬಸವರಾಜ ಯತ್ನಾಳ ಕೂಡ ಸಚಿವರು ಇದುವರೆಗೆ ತೆಗೆದುಕೊಂಡಿರುವ ಉಪಕ್ರಮಗಳ ಬಗ್ಗೆ ಮುಕ್ತ ಪ್ರಶಂಸೆ ವ್ಯಕ್ತಪಡಿಸಿದರು.

ವಿಜಯಪುರದ ಸಾಬೂನು ಘಟಕದಿಂದ ಉತ್ತರ ಕರ್ನಾಟಕ ಕ್ಕೆ ಮಾತ್ರವಲ್ಲದೆ, ಮಹಾರಾಷ್ಟ್ರ ಕ್ಕೂ ಇಲ್ಲಿಂದಲೇ ಸರಬರಾಜು ಮಾಡುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಕೆಎಸ್ಡಿಎಲ್ ಮೊದಲು ನಷ್ಟದಲ್ಲಿತ್ತು. ಈಗ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದ್ದು, ಸಂಸ್ಥೆಯು ಲಾಭದ ಹಳಿಗೆ ಬಂದಿದೆ. ಜತೆಗೆ ತಾವು ಸಚಿವರಾದ ಮೇಲೆ ಗುಣಮಟ್ಟದ 20 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಬರುವ ದಿನಗಳಲ್ಲಿ ಸಂಸ್ಥೆಯ ಗತವೈಭವ ಮರುಕಳಿಸುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಿರಾಣಿ ಅಂಗಡಿ, ವಿಮಾನ ನಿಲ್ದಾಣ, ವಿದೇಶಗಳ ಮಳಿಗೆ ಹೀಗೆ ಎಲ್ಲ ಕಡೆಯೂ ಮೈಸೂರು ಸ್ಯಾಂಡಲ್ ಸೋಪ್ ಮತ್ತು ಸಂಸ್ಥೆಯ ಇತರ ಉತ್ಪನ್ನಗಳು ದೊರೆಯುವಂತೆ ಮಾಡಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯದ ವಿಶಿಷ್ಟ ಉತ್ಪನ್ನಗಳ ಮಾರಾಟಕ್ಕೆಂದೇ ಕಲಾಲೋಕ ಮಳಿಗೆ ಸ್ಥಾಪಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಸಂಸ್ಥೆಯ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ‌ ನಿರ್ದೇಶಕ ಪಿ ಕೆ ಎಂ ಪ್ರಶಾಂತ್, ಜಿಲ್ಲಾಧಿಕಾರಿ ಭೂಪಾಲನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ಋಷಿ ಆನಂದ್ ಮುಂತಾದವರು ಉಪಸ್ಥಿತರಿದ್ದರು.

‘BJP ದಲಿತ ಪರ ನಿಲುವು’ ಕುಚೋದ್ಯ ಸಂಗತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM1 Min Read

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM1 Min Read

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM1 Min Read
Recent News

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM

BREAKING: ಮೈಸೂರು ಜಿಲ್ಲಾಧಿಕಾರಿಗೆ ಸಂಕಷ್ಟ: ಬಂಧನದ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!

03/04/2026 5:18 PM
State News
KARNATAKA

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

By kannadanewsnow0903/04/2026 5:26 PM KARNATAKA 1 Min Read

ಕಾರವಾರ: ಜೈಲಿನಲ್ಲಿದ್ದ ಕೈದಿಯೊಬ್ಬನಿಗೆ ಬರಬೇಕಿದ್ದ ಸರ್ಕಾರಿ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರವಾರ ಜಿಲ್ಲಾ ಕಾರಾಗೃಹದ ಜೈಲರ್…

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM

BREAKING: ಮೈಸೂರು ಜಿಲ್ಲಾಧಿಕಾರಿಗೆ ಸಂಕಷ್ಟ: ಬಂಧನದ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!

03/04/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.