ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿ, ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಕೆಲವು ಐಡಿ ಕಾರ್ಡ್ ಗಳು ದೊರೆತಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಲ್ಲದೇ ಮೂವರು ಶಂಕಿತರು ದುಷ್ಕೃತ್ಯವೆಸಗಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ಕುಂದಲಹಳ್ಳಿ ಬಳಿಯಲ್ಲಿ ಇರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಟ್, ಹೆಚ್ಎಎಲ್ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದೀಗ ಘಟನಾ ಸ್ಥಳವನ್ನು ಸುತ್ತುವರೆದಿರುವಂತ ವೈಟ್ ಫೀಲ್ಡ್ ಠಾಣೆಯ ಪೊಲೀಸರು, ಸ್ಪೋಟಕ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme