ಹರಿಯಾಣ : ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಆತಂಕಕಾರಿ ಘಟನೆ ಹರಿಯಾಣದ ಬಾಲಾನಾ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.
ಘಟನೆಯಲ್ಲಿ 2 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಸದಸ್ಯರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಂಗತ್ ರಾಮ್ (65), ಅವರ ಪತ್ನಿ ಮಹೀಂದ್ರಾ ಕೌರ್, ಸುಖ್ವಿಂದರ್ ಸಿಂಗ್ (34) ಮತ್ತು ಅವರ ಪತ್ನಿ ರೀನಾ ಎಂದು ಗುರುತಿಸಲಾಗಿದೆ. ಮೃತರಲ್ಲಿ ಸುಖ್ವಿಂದರ್ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಕೂಡ ಸೇರಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ದೇಹಗಳಿದ್ದ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ.
ಇದೇ ರೀತಿಯ ಘಟನೆ ಎರಡು ವಾರದ ಹಿಂದೆ ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಕೂಡಾ ನಡೆದಿದ್ದು ಒಂದೇ ಕುಟುಂಬದ ಆರು ಮಂದಿ ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.