ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಒಂದಾಗಿರುವಂತ ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಜಿಲ್ಲೆಯ ಕಬ್ಬು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ.
ಮಂಡ್ಯ ಜಿಲ್ಲೆಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು. ಈ ಬಳಿಕ ಇದೀಗ ಯಂತ್ರೋಪಕರಣ ರಿಪೇರಿ ಸೇರಿದಂತೆ ಕಾರ್ಖಾನೆಯ ಎಲ್ಲಾ ಯಂತ್ರಗಳ ದುರಸ್ಥಿ ಕಾರ್ಯ ಮುಕ್ತಾಯಗೊಂಡಿದೆ.
ಈ ಹಿನ್ನಲೆಯಲ್ಲಿಯೇ ಕಾರ್ಖಾನೆಯಲ್ಲಿ ಇಂದು ಶಾಂತಿಗಾಗಿ ಹೋಮ, ಹವನ ಹಾಗೂ ಬಾಯ್ಲರ್ ಗಳಿಗೆ ಅಗ್ನಿ ಸ್ಪರ್ಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಳಿಕ ಆಗಸ್ಟ್ 17 ಅಥವಾ 18ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಧಿಕೃತವಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ಅಂದಹಾಗೇ ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾಗಿದ್ದಂತ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 4 ವರ್ಷಗಳಿಂದ ಮುಚ್ಚಲ್ಪಟ್ಟಿತ್ತು. ಈ ಕಾರ್ಖಾನೆಯ ಪುನಶ್ಚೇತನಕ್ಕಾಗಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ, ಯಂತ್ರಗಳ ರಿಪೇರಿ ಸೇರಿದಂತೆ, ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿತ್ತು.
BIGG NEWS: ಅಟಲ್ ಪಿಂಚಣಿ ಯೋಜನೆ ಹೊಸ ನಿಯಮ: ಹೂಡಿಕೆದಾರರು ಅಕ್ಟೋಬರ್ ನಿಂದ ಸೇರುವಂತಿಲ್ಲ