ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಈ ಒಂದು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಬೈಕ್ಸ್ ಅವರ ಮೃತಪಟ್ಟಿದ್ದರೆ, ಬೈಕ್ ನಿಂದ ಹಾರಿ ಸೇತುವೆಯ ಕೆಳಗೆ ಬಿದ್ದಿರುವ ಮಹಿಳೆ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬನ್ನೂರು ಸೇತುವೆ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿ ಡಿಕ್ಕಿಯ ರಭಸಕ್ಕೆ ಬೈಕ್ ನಿಂದ ಹಾರಿ ಸೇತುವೆಯಿಂದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಬನ್ನೂರು ಸೇತುವೆಯಿಂದ ಕೆಳಗೆ ಬಿದ್ದ ಮಹಿಳೆಗಾಗಿ ಇದೀಗ ಹುಡುಕಾಟ ನಡೆಸಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೃತ ಬೈಕ್ ಸವಾರನ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.