ಮೈಸೂರು: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಸೆ.6ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಕಮಿಷನ್ ಖಂಡಿಸಿ 1 ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿವಿಮಾತು
ಈ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾತಿಯನ್ನು ಸರ್ಕಾರದಿಂದ ನಿಗದಿ ಪಡಿಸಿದೆ ಎಂದು ತಿಳಿಸಿದ್ದಾರೆ.
ಈ ಮೀಸಲಾತಿಯಂತೆ ಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ದಿನಾಂಕ 06-09-2022ರಂದು ಮಧ್ಯಾಹ್ನ 12 ಗಂಟೆಗೆ ನಡೆಸಲು ನಿಗಧಿ ಪಡಿಸಿರೋದಾಗಿ ಹೇಳಿದ್ದಾರೆ.