ಚೈನ್ನೈ: ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ ರೈಲು ಚೆನ್ನೈ ಬಳಿಯ ಕವರೈಪೆಟ್ಟೈ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಎರಡು ಬೋಗಿಗಳು ಹಳಿ ತಪ್ಪಿರುವುದಾಗಿ ತಿಳಿದು ಬಂದಿದೆ.
ಮೈಸೂರು-ದರ್ಭಾಂಗ ಎಕ್ಸ್ಪ್ರೆಸ್ ಶುಕ್ರವಾರ ಸಂಜೆ ತಮಿಳುನಾಡಿನ ಗುಮ್ಮಡಿಪೂಂಡಿ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, 12578 ಮೈಸೂರು-ದರ್ಭಂಗಾ ಎಕ್ಸ್ಪ್ರೆಸ್ನ ಕನಿಷ್ಠ ಎರಡು ಎಸಿ ಬೋಗಿಗಳು ಹಳಿ ತಪ್ಪಿವೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಶೀಘ್ರದಲ್ಲೇ ಅಪಘಾತದ ಸ್ಥಳಕ್ಕೆ ಬರುವ ನಿರೀಕ್ಷೆಯಿದೆ.