ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ( Mysore Dasara 2022 ) ಜಂಬೂಸವಾರಿಗೆ ( Mysuru Dasara Jambhusavari ) ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 5ರಂದು ನಡೆಯಲಿರುವಂತ ಜಂಬೂಸವಾರಿ ಮೆರವಣಿಗೆಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮೂಲಕ ಜಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೆ ಯಾರೆಲ್ಲಾ ಉಪಸ್ಥಿತರಾಗಿರಬೇಕೆಂದು ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಮೈಸೂರು ಇವರು ಕೋರಿರುವಂತೆ 2022ರ ಮೈಸೂರು ದಸರಾ ಆಚರಣೆಯ ವಿಜಯದಶಮಿಯಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಜಂಬೂಸವಾರಿಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಿದ್ದಾರೆ ಎಂದಿದ್ದಾರೆ.
ನಿಮ್ಮ ‘ಹೈಪರ್ ಅಸಿಡಿಟಿ’ಗೆ ಈ ‘ಮನೆಮದ್ದು’ ಮಾಡಿ, ರೋಗ ಮಾಯ | Hyperacidity
ಇನ್ನೂ ಸಿಎಂ ಅವರೊಂದಿಗೆ ವೇದಿಕೆಯ ಮೇಲೆ ಕರ್ನಾಟಕ ಹೈಕೋರ್ಟ್ ನ ಮುಖ್ಯನ್ಯಾಯಾಧೀಶರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರು, ಮೈಸೂರು ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಮೈಸೂರು ರಾಜ ಮನೆತನದ ಪರವಾದ ಪ್ರತಿನಿಧಿ ಎಂದು ತಿಳಿಸಿದ್ದಾರೆ.
BIGG NEWS: ಮನಾಲಿಯಲ್ಲಿ ಜಾನಪದ ಕಲಾವಿದರೊಂದಿಗೆ ನೃತ್ಯ ಮಾಡಿದ ʼಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ʼ| Watch