ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗೋಲ್ಡ್ ಕಾರ್ಡ್ ಸೇರಿದಂತೆ ವಿವಿಧ ಪಾಸುಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗುತ್ತಿದೆ. ಸೆಪ್ಟೆಂಬರ್.26ರಿಂದ ದಸರಾ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ.
ಈ ಕುರಿತಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆನ್ ಲೈನ್ ಮುಖಾಂತರ ದಸರಾ ಗೋಲ್ಡ್ ಕಾರ್ಡ್ ಹಾಗು ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದರು.
ಹೀಗಿದೆ ಮೈಸೂರು ದಸರಾ ಗೋಲ್ಡ್ ಕಾರ್ಡ್ ಸೇರಿ ಇತರೆ ಟಿಕೆಟ್ ದರಪಟ್ಟಿ
ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ ಗಳು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್.26ರಿಂದ 30ರವರೆಗೆ ಒಟ್ಟು ಐದು ದಿನಗಳ ಕಾಲ ಆನ್ ಲೈನ್ ಮೂಲಕ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ಒಂದು ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂಪಾಯಿ ನಿಗದಿ ಪಡಿಸಲಾಗಿದೆ. ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂಪಾಯಿ ನಿಗದಿ ಮಾಡಲಾಗಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್