ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ( President draupadi murmu ) ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು.
HEALTH TIPS: ನಿಮಗೆ ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲವೇ? ಹಾಗಾದ್ರೆ ಮಲಗುವ ಮುನ್ನ ಈ 5 ಕ್ರಮ ಅನುಸರಿಸಿ
‘ವಿಶ್ವವಿಖ್ಯಾತ ಮೈಸೂರು ದಸರಾ 2022’ಕ್ಕೆ ದಿನಾಂಕ ನಿಗದಿ : ಯಾವ ದಿನದಂದು ಯಾವ ಪೂಜೆ? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ ನೋಡಿಕೊಳ್ಳಲಾಗುತ್ತದೆ. ದಸರಾ ಬ್ರ್ಯಾಂಡ್ ಆಗಬೇಕು. ಆ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದರು.
ಇನ್ನೂ ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂಬುದಾಗಿ ಹೇಳಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ2022 ರ ಕಾರ್ಯಕ್ರಮಗಳ ಸಂಪೂರ್ಣ ವಿವರ. ಯಾವದಿನದಂದು ಯಾವ ಪೂಜೆ, ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾದ ಗಜ ಪಡೆಗಳ ಆಗಮನ, ನಿರ್ಗಮನದ ಕಂಪ್ಲೀಟ್ ಡಿಟೇಲ್