ಮೈಸೂರು : ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ, ಇದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಸಿಎಂ ಗೋಪಾಲ್ ಮತ್ತು ಆತನ ಪುತ್ರ ಅಭಿಷೇಕಗೆ ಚಾಕು ಇರಿಲಾಗಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿಎಂ ಮಂಜುನಾಥನಿಂದ ಈ ಒಂದು ಕೃತ್ಯ ನಡೆದಿದೆ. ಸಿಎಂ ಗೋಪಾಲ ಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥನನ್ನು ಸಾಲಿಗ್ರಾಮ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶಿಕ್ಷಕ ಮಂಜುನಾಥನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.








