ಮೈಸೂರು : ಬೈಕ್ ನಲ್ಲಿ ವೇಗವಾಗಿ ಬಂದಂತಹ ಯುವಕನೊಬ್ಬ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದಲ್ಲಿದ್ದ ನದಿಗೆ ಹಾರಿ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಮೃತ ಯುವಕನನ್ನು ಗುರುಪುರ ಗ್ರಾಮದ ಸುಹೇಲ್( 22 ) ಎನ್ನಲಾಗಿದೆ. ಬೋಳರುವ ಹಣಕ್ಕೆ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸೂಹೆಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಆಜಾದ್ ನಗರದ ಬಳಿ ನಡೆದಿದೆ.
ಸುಹೇಲ್ ಸ್ವಗ್ರಾಮಕ್ಕೆ ವಾಪಸ್ಸಾಗುವ ವೇಳೆ ಎದುರಿನಲ್ಲಿ ಹೋಗುತ್ತಿದ್ದ ಬೊಲೆರೋ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ವೇಗವಾಗಿದ್ದ ಬೈಕ್ ಸವಾರ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದು ನದಿಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವೇಳೆ ಚಾಲಕ ವಾಹನ ಅಲ್ಲಿ ಬಿಟ್ಟು ಪರಾರಿಯಾಗಿದ್ದು, ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.