ಮೈಸೂರು : ಮೈಸೂರಿನ ಹೊಸರಾಮನಹಳ್ಳಿ ಬಳಿ ಲಕ್ಷ್ಮಣತೀರ್ಥ ನದಿಯಲ್ಲಿ ವಕೀಲ ಕೆ. ರಾಜು ಎನ್ನುವ ಶವ ಪತ್ತೆಯಾಗಿದೆ. ವಕೀಲ ಕೆ.ರಾಜು, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಾಪತ್ತೆಯಾಗಿದ್ದರು. ವಕೀಲ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಹೊಸ ರಾಮನಹಳ್ಳಿ ಬಳಿ ಲಕ್ಷ್ಮಣ ತೀರ್ಥ ನದಿಯಲ್ಲಿ ಕೆ. ರಾಜು ಶವವಾಗಿ ಪತ್ತೆಯಾಗಿದ್ದಾರೆ.
ಹುಣಸೂರಿನ ಗೋಕುಲ ಬಡಾವಣೆ ನಿವಾಸಿಯಾಗಿದ್ದ ಹೋಗುತ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದಾರೆ. ಮನೆಗೆ ಬಾರದ ಹಿನ್ನೆಲೆಯಲ್ಲಿ ವಕೀಲನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಕೆ.ರಾಜು ಲಕ್ಷ್ಮಣ ತೀರ್ಥ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನದಿಗೆ ಹಾರಿ ವಕೀಲ ಕೆ.ರಾಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








