ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ರ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಇಂದು ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದ್ದಾರೆ.
ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆಯ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ರವರೊಂದಿಗೆ ಸಾಂಪ್ರದಾಯಿಕವಾಗಿ ಚಾಲನೆ ನೀಡಲಾಯಿತು.
ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ನಂತರ ಲಾರಿಗಳ ಮೂಲಕ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ ಭಾಗವಹಿಸಲಿವೆ. ಈ ಭಾರಿ ಅದ್ದೂರಿ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.
ಹೀಗಿದೆ ‘ಮೈಸೂರು ದಸರಾ ಆನೆ’ಗಳ ಪಟ್ಟಿ
ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಮಹೇಂದ್ರ, ಗೋಪಿ, ಭೀಮ, ಪ್ರಶಾಂತ, ಧನಂಜಯ, ಸುಗ್ರೀವ, ಹಿರಣ್ಯ, ರೋಹಿತ, ಏಕಲವ್ಯ ಕಂಜನ್, ಲಕ್ಷ್ಮೀ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ.