ಮೈಸೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೈಸೂರು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ತಪ್ಪುವ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮೈಸೂರಿನ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಯದುವೀರ್ ಸ್ಪರ್ಧೆಗೆ ರಾಜಮಾತೆ ಪ್ರಮೋದಾದೇವಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹೌದು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪುವ ವದಂತಿ ಹಬ್ಬಿದೆ. ಹೀಗಾಗಿ ಅವರನ್ನು ಕೈ ಬಿಟ್ಟು ಮೈಸೂರು ಯುವರಾಜ ಯದುವೀರ ಒಡೆಯರ್ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಕುರಿತು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಆಪ್ತ ವಲಯದಲ್ಲಿ ಕೇಳಿ ಬಂದಿದೆ. ಆದರೆ ಇದಕ್ಕೆ ಕೇಂದ್ರ ಸಚಿವ ಪರರದ ಜೋಶಿ ಅವರು ನಿನ್ನೆ ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಲ್ಲ ಅವೆಲ್ಲ ಊಹಾಪೋಹಗಳು ಎಂದು ಸ್ಪಷ್ಟನೆ ನೀಡಿದ್ದಾರೆ.
UPDATE : ಬಿಡದಿ ಬಳಿ ತೋಟದ ಮನೆಯಲ್ಲಿ 25 ಬುರುಡೆಗಳು ಪತ್ತೆ ಕೇಸ್ : ಸ್ಥಳಕ್ಕೆ ‘FSL’ ತಂಡ ಭೇಟಿ ಪರಿಶೀಲನೆ
ಆದರೆ ಇದಕ್ಕೆ ಯದುವೀರ್ ಒಡೆಯರ್ ಅವರ ತಾಯಿ ರಾಜಮಾತೆ ಪ್ರಮೋದಾ ದೇವಿಯವರು ಯದುವೀರ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ಒಪ್ಪಿಗೆ ಸೂಚಿಸಿಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಯದುವೀರ ಅವರ ತಾಯಿ ಪ್ರಮೋದಾ ದೇವಿಯನ್ನು ಮನವೊಲಿಸಲು ಪ್ರಯತ್ನಿಸುತ್ತಿವೆ ಎಂದು ತಿಳಿದುಬಂದಿದೆ.