ಮೈಸೂರು : ದಸರಾ ಮಹೋತ್ಸವದ ಸಾಂಸ್ಕೃತಿಕ ಉಪಸಮಿತಿಯಿಂದ ಆ.3 ರಿಂದ ಅ.11 ರವರೆಗೆ ನಾನಾ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಮರನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲಾಗಿದ್ದು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ದಿನಾಂಕ: 03-10-2024 ರಿಂದ 12-10-2024ರ ವರೆಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿರುತ್ತದೆ. ಈ ಸಂಬಂಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ದಿನಾಂಕ: 03-10-2024 ರಿಂದ 11-10-2024ರ ವರೆಗೆ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ/ಕಲಾತಂಡಗಳಿಂದ ದಿನಾಂಕ: 27-08-2024 ರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2024 ಆಗಿರುತ್ತದೆ. ಸದರಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು-570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಿಂಚಂಚೆ ಮೂಲಕವು codasara23@gamail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0821-2513225ಗೆ ಸಂಪರ್ಕಿಸಲು ತಿಳಿಸಿದೆ. ಹಾಗೂ ಕಲಾವಿದರಿಗೆ ಕಾರ್ಯಕ್ರಮ ಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ನಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಲು ಕೋರಿದೆ.