ಒಗ್ಗೂಡಿ ಕೆಲಸ ಮಾಡಲು ನಡ್ಡಾಜೀ ಸೂಚನೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದ್ದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಕುಮಾರಕೃಪ ವಸತಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಡ್ಡಾಜೀ ಅವರು ಒಂದು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ನಾವು ಸಹಜವಾಗಿಯೇ ಮಾತುಕತೆ ನಡೆಸಿದ್ದೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ ಎಂದು ವಿವರ ನೀಡಿದರು. ಸಂಘಟನೆಯ ಬಗ್ಗೆ ಕೇಳಿದ್ದು, ಎಲ್ಲವನ್ನೂ … Continue reading ಒಗ್ಗೂಡಿ ಕೆಲಸ ಮಾಡಲು ನಡ್ಡಾಜೀ ಸೂಚನೆ: ಛಲವಾದಿ ನಾರಾಯಣಸ್ವಾಮಿ