ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದಂತಹ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 55 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮಂಡ್ಯದ ಜಿಲ್ಲಾ ಸತ್ರ ನ್ಯಾಯಾಲಯವು ಕಳೆದ ಶುಕ್ರವಾರ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಇಂದು ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿತ್ತು.ತಲಾ ಒಂದು ಲಕ್ಷ ಬಾಂಡ್ ಹಾಗೂ ಪ್ರತಿ ರವಿವಾರ ಠಾಣೆಗೆ ಬಂದು ಸಹಿ ಹಾಕುವಂತೆ ಕೋರ್ಟ್ ಆದೇಶ ನೀಡಿತ್ತು. ಅದರ ಅನ್ವಯ ಇಂದು 55 ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.