ಬೆಂಗಳೂರು: ನಜ್ಮಾ ನಜೀರ್ ಚಿಕ್ಕನೇರಳೆ ಅವರು ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.
ಈ ನಡುವೆ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಖುದ್ದು ಕಾಂಗ್ರೆಸ್‌ನ ಹಲವು ಮಂದಿ ವ್ಯಂಗ್ಯವಾಡುತ್ತಿದ್ದಾರೆ. ಈ ಹಿಂದೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಜೆಡಿಎಸ್ ವಕ್ತರಾಗಿದ್ದ ವೇಳೇಯಲ್ಲಿ ನಜ್ಮಾ ಅವರು ಕೈ ಅನ್ನು ಹಿಗ್ಗಾಮುಗ್ಗ ಜಾಡಿಸಿದ್ದು ಅತಿ ಹೆಚ್ಚು, ಈಗ ಅವರೇ ಕಾಂಗ್ರೆಸ್‌ಗೆ ಸೇರುತ್ತಿರುವುದು ಅವಕಾಶವಾದಿ ರಾಜಕಾರಣ ಎನ್ನುತ್ತಿದ್ದಾರೆ. ಕೆಲವು ಮಂದಿ ಕಾಂಗ್ರೆಸ್ ಬಗ್ಗೆ ಮಾತನಾಡಿದ್ದ ವಿಡಿಯೋಗಳನ್ನು ಡಿಲೀಟ್ ಮಾಡಿ ಬಿಡಿ ಇಲ್ಲವಾದಲ್ಲಿ ನಿಮ್ಮ ನಾಯಕರುಗಳು ನಿಮ್ಮ ವಿಡಿಯೋವನ್ನು ನೋಡಿದರೆ ಮುಂದೆ ಆಗೋದು ಬೇರೆ ಎನ್ನುತ್ತಿದ್ದಾರೆ.
ಒಟ್ಟಿನಲ್ಲಿ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಯಿಂದ ಕಾಂಗ್ರೆಸ್ ಯಾವ ರೀತಿಯಲ್ಲಿ ಸ್ಟ್ರಾಂಗ್ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.