ಬೆಂಗಳೂರು : ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್ , ಅವರ ಮಾತಿಗೆಲ್ಲಾ ಉತ್ತರ ಕೊಡುತ್ತಾ ಟೈಮ್ ವೇಸ್ಟ್ ಮಾಡಲ್ಲ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ , ”ಪರೇಶ್ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದ್ದರು. ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದ್ದರು” ಎಂದು ವಾಗ್ದಾಳಿ ನಡೆಸಿದರು.
ಈ ಪ್ರಕರಣವನ್ನು ನಾನು ಸಿಬಿಐಗೆ ವಹಿಸಿದ್ದೆ. ಆಗಲೂ ನರೇಂದ್ರ ಮೋದಿ ಅವರೇ ಪ್ರಧಾನಿ ಆಗಿದ್ದರು. ಈಗ ಸಿಬಿಐ ವರದಿಯಲ್ಲಿ ಇದು ಆಕಸ್ಮಿಕ ಸಾವು ಎಂದು ಬಂದಿದೆ. ಅದಕ್ಕೆ ಬಿಜೆಪಿಯವರು ಸಿದ್ದರಾಮಯ್ಯನವರು ಸಾಕ್ಷ್ಯ ನಾಶ ಮಾಡಿದರು ಎನ್ನುತ್ತಿದ್ದಾರೆ ಎಂದು ಕಿಡಿಕಾರಿದರು.
ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು. ಜೆಡಿಎಸ್ನವರು ಚೋರ್ ಬಚಾವೋ ಇನ್ಸ್ಟಿಟ್ಯೂಟ್ ಎನ್ನುತ್ತಿದ್ದರು. ಈಗ ಸಿಬಿಐಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ?, ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್ , ಅವರ ಮಾತಿಗೆಲ್ಲಾ ಉತ್ತರ ಕೊಡುತ್ತಾ ಟೈಮ್ ವೇಸ್ಟ್ ಮಾಡಲ್ಲ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಪ್ರವಾಸಿಗರಿಗೆ ಮುಖ್ಯ ಮಾಹಿತಿ : ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಮತ್ತೆ ಆರಂಭ