ಬೆಂಗಳೂರು: ದೆಹಲಿಯಲ್ಲಿ ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿಜಿ ಅವರ ಸಮ್ಮುಖದಲ್ಲಿ ಅಭಿನಂದಿಸಿದರು ಮತ್ತು ಶುಭ ಕೋರಿದರು.
ರಾಜ್ಯದ ‘ಪಡಿತರದಾರ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಸಾರವರ್ಧಿತ ಅಕ್ಕಿ’ ವಿತರಣೆ
ಅಲ್ಲದೆ ಇದೇವೇಳೆ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಹಾರಾರ್ಪಣೆ ಮಾಡಿ ಗೌರವಿಸಿದರು.
ಶಿಕ್ಷಣ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳು ಸೇರಿದಂತೆ ವಿವಿಧ ರಂಗಗಳಲ್ಲಿ ಅಸಾಧಾರಣ ಸೇವೆ ಮಾಡುತ್ತಿರುವ ಹಾಗೂ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದ ಡಾ. ವೀರೇಂದ್ರ ಹೆಗ್ಗಡೆ ಅವರ ಆಯ್ಕೆಯಿಂದ ಕನ್ನಡನಾಡಿಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಗೌರವ ಲಭಿಸಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.