ಬೆಳ್ತಂಗಡಿ: ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದ್ರೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬಂದ್ ಮಾಡೋದಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
ಇಂದು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನ್ಯಾಯ ಕೇಳಿ ಬಿಜೆಪಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಅಂತವರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಪ್ರಕರಣಗಳನ್ನು ದಾಖಲಿಸಿದೆ ಎಂಬುದಾಗಿ ಕಿಡಿಕಾರಿದರು.
ನಾವು ಯಾವುದೇ ಕಾರಣಕ್ಕೂ ಶಾಸಕರನ್ನ ಬಿಟ್ಟುಕೊಡೋ ಮಾತೇ ಇಲ್ಲ. ನಮ್ಮ ಶಾಸಕರನ್ನು ನಾವು ಬಿಟ್ಟುಕೊಡೋ ಪ್ರಶ್ನೆಯೂ ಇಲ್ಲ. ಒಂದು ವೇಳೆ ಶಾಸಕ ಹರೀಶ್ ಪೂಂಜ ಬಂಧಿಸಿದ್ದೇ ಆದ್ರೇ, ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಂದ್ ಮಾಡಿ ಖಂಡಿಸೋದಾಗಿ ಎಚ್ಚರಿಕೆ ನೀಡಿದರು.
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ