ನವದೆಹಲಿ: ಹಿರಿಯ ವಿಜ್ಞಾನಿ ನಲ್ಲತಂಬಿ ಕಲೈಸೆಲ್ವಿ(Nallathamby Kalaiselvi) ಅವರನ್ನು ಶನಿವಾರ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)ನ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ದೇಶದಾದ್ಯಂತ 38 ಸಂಶೋಧನಾ ಸಂಸ್ಥೆಗಳ ಒಕ್ಕೂಟವನ್ನು ಮುನ್ನಡೆಸಿದ ಮೊದಲ ಮಹಿಳೆ ಇವರಾಗಿದ್ದಾರೆ.

ಲಿಥಿಯಂ ಐಯಾನ್ ಬ್ಯಾಟರಿಗಳ ಕ್ಷೇತ್ರ(field of lithium ion batteries)ದಲ್ಲಿ ಹೆಸರುವಾಸಿಯಾಗಿರುವ ನಲ್ಲತಂಬಿ ಪ್ರಸ್ತುತ ತಮಿಳುನಾಡಿನ ಕಾರೈಕುಡಿಯಲ್ಲಿರುವ CSIR-ಸೆಂಟ್ರಲ್ ಎಲೆಕ್ಟ್ರೋಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್‌ನ ನಿರ್ದೇಶಕರಾಗಿದ್ದಾರೆ.

ನಲ್ಲತಂಬಿ ಅವರು ಏಪ್ರಿಲ್‌ನಲ್ಲಿ ನಿವೃತ್ತಿ ಹೊಂದಿದ ಶೇಖರ್ ಮಾಂಡೆ ಅವರ ಉತ್ತರಾಧಿಕಾರಿಯಾಗಿದ್ದಾರೆ. ಇನ್ನೂ, ಅವರು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆಯ ಕಾರ್ಯದರ್ಶಿಯಾಗಿಯೂ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನಲ್ಲತಂಬಿ ಅವರ ನೇಮಕಾತಿಯು ಹುದ್ದೆಯ ಪ್ರಭಾರವನ್ನು ವಹಿಸಿಕೊಂಡ ದಿನಾಂಕದಿಂದ ಅಥವಾ ಮುಂದಿನ ಆದೇಶದವರೆಗೆ ಎರಡು ವರ್ಷಗಳ ಅವಧಿಗೆ ಅನ್ವಯವಾಗುತ್ತದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಅಂಬಾಸಮುದ್ರಂ ಎಂಬ ಸಣ್ಣ ಪಟ್ಟಣದವರಾಗಿದ್ದಾರೆ.

BIGG NEWS : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ : ಆಗಸ್ಟ್ 15 ರೊಳಗೆ ಪಿ.ಎಂ.ಕಿಸಾನ್ ಯೋಜನೆಯಡಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ʻಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದೇ ತಪ್ಪಾಯ್ತಾ?ʼ: ಗಂಡನ ಕಿರುಕುಳ ತಾಳಲಾರದೇ ಅಮೆರಿಕದಲ್ಲಿ ಆತ್ಮಹತ್ಯೆಗೆ ಶಾರಣಾದ ಭಾರತೀಯ ಮಹಿಳೆ… Video

BIGG NEWS : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ : ಹಲವಡೆ ರಸ್ತೆ ಸಂಪರ್ಕ ಕಡಿತ

Share.
Exit mobile version