ಬೆಂಗಳೂರು:‘ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ’ ನಿಯಮ ಪಾಲಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಎಲ್ಲ ವ್ಯವಹಾರಗಳ ಸಮೀಕ್ಷೆ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಪ್ರಕ್ರಿಯೆ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು. ಟ್ರೇಡ್ ಲೈಸೆನ್ಸ್ ಅಗತ್ಯವಿಲ್ಲದ ಸಂಸ್ಥೆಗಳ ಸಂದರ್ಭದಲ್ಲಿ, ನಿಯಮವನ್ನು ಅನುಸರಿಸಲು ವಿಫಲವಾದರೆ ನಾವು ಅಂಗಡಿಯನ್ನು ಮುಚ್ಚಬಹುದು ಎಂದು ಗಿರಿನಾಥ್ ಹೇಳಿದರು.
ಯಾವುದೇ ಒತ್ತಡಕ್ಕೆ ಮಣಿಯದೆ ಕೂಡಲೇ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.